ETV Bharat / state

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಹಾಸನ ಡಿಸಿ ಸಭೆ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ 2021ಜನವರಿ 1ಕ್ಕೆ 18 ವರ್ಷ ಪೂರೈಸುವ ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸುವ ಸಂಬಂಧ ಇಂದು ಹಾಸನ ಜಿಲ್ಲಾಧಿಕಾರಿ ಮಹತ್ವದ ಸಭೆ ನಡೆಸಿದ್ದಾರೆ.

hassan dc pressmeet on new voter list
ಹಾಸನ ಡಿಸಿ ಸಭೆ
author img

By

Published : Aug 24, 2020, 10:48 PM IST

ಹಾಸನ:ಕೇಂದ್ರ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ 2021ಜನವರಿ 1ಕ್ಕೆ 18 ವರ್ಷ ಪೂರೈಸುವ ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸಲು ಹಾಗೂ ಅನರ್ಹರನ್ನು ಕೈಬಿಡಲು ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ನಡೆಯಲಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಆರ್. ಗಿರೀಶ್ ಮುನ್ಸೂಚನೆ ನೀಡಿದರು.

hassan dc pressmeet on new voter list
ಹಾಸನ ಡಿಸಿ ಸಭೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಯಾವುದಾದರು ಮತಗಟ್ಟೆಯಲ್ಲಿ 1200 ಕ್ಕಿಂತ ಹೆಚ್ಚು ಮತದಾರರಿದ್ದರೆ ಅಥವಾ 2 ಕಿ.ಲೋ. ಮೀಟರ್‌ಗಿಂತ ಹೆಚ್ಚಿನ ಅಂತರವಿದ್ದರೆ ಅಂತಹ ಸ್ಥಳಗಳಲ್ಲಿ ಹೊಸ ಮತಗಟ್ಟೆಯನ್ನು ಸ್ಥಾಪಿಸಲು ಅವಕಾಶವಿದೆ ಹಾಗಾಗಿ ಅಂತಹ ಕೋರಿಕೆಗಳಿದ್ದರೆ ಮನವಿ ಸಲ್ಲಿಸಬಹುದಾಗಿದೆ ಎಂದರು.

ಮತದಾರರ ಪಟ್ಟಿಯಲ್ಲಿ ಒಬ್ಬ ವ್ಯಕ್ತಿಯ 2,3 ನೋಂದಣಿಗಳಿದ್ದಲ್ಲಿ, ಅವುಗಳನ್ನು ತೆಗೆದುಹಾಕಬೇಕು. ಈಗಾಗಲೇ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಚಟುವಟಿಕೆ ಪ್ರಾರಂಭವಾಗಿದ್ದು, ಬೂತ್ ಲೆವೆಲ್ ಆಫೀಸರ್‌ಗಳು ಮನೆ ಮನೆಗೆ ಭೆಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. 2021ರ ಜನವರಿ 15ಕ್ಕೆ ಅಂತಿಮ ಮತಪಟ್ಟಿಯನ್ನು ತಯಾರು ಮಾಡಲಾಗುತ್ತದೆ ಹಾಗಾಗಿ ರಾಜಕೀಯ ಪಕ್ಷಗಳು ಇದಕ್ಕೆ ಸಹಕರಿಸಬೇಕು ಎಂದು ಕೋರಿದರು.

ಚುನಾವಣಾ ಆಯೋಗದ ಉಲ್ಲೇಖಿತ ಪತ್ರಗಳ ನಿರ್ದೇಶನದನ್ವಯ ನಿಗದಿ ಪಡಿಸಲಾಗಿರುವ ವೇಳಾಪಟ್ಟಿಯಂತೆ ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹಾಗೂ 2016ರ ಮತದಾರರ ಪಟ್ಟಿಗಳ ಕೈಪಿಡಿಯಂತೆ ಅಗತ್ಯ ಸೂಚನೆಗಳನ್ನು ಪಾಲಿಸಿಕೊಂಡು ಕಾಲ-ಕಾಲಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.

ಪ್ರಸ್ತುತ ಸಾಲಿನಲ್ಲಿ ಕೈಗೊಳ್ಳಲಾಗುವ ಪರಿಷ್ಕರಣೆ ಕಾರ್ಯಗಳನ್ನು ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಇಚ್ಛಿಸುವವರು, ಮತದಾರರ ಪಟ್ಟಿಯಿಂದ ವಲಸೆ ಮತದಾರರು, ಮರಣ ಹೊಂದಿರುವ ಮತದಾರರ ಹಾಗೂ ಇತರೆ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲು ಇಚ್ಛಿಸುವವರು, ಮತದಾರರ ಪಟ್ಟಿಯಲ್ಲಿ ತಿದ್ದುಪಡಿಗೆ ಇಚ್ಛಿಸುವವರು ತಮ್ಮ-ತಮ್ಮ ಕಾರ್ಯಗಳನ್ನು ಸಂಬಂಧಪಟ್ಟ ಆಯಾ ಮತಗಟ್ಟೆ ಅಧಿಕಾರಿ, ಸಂಬಂಧಪಟ್ಟ ತಾಲ್ಲೂಕು ಕಚೇರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾದಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯವನ್ನು ಆ.30 ರೊಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ತಹಶೀಲ್ದಾರರಿಗೆ ತಿಳಿಸಿದ್ದು, ಯಾವುದಾದರು ಸಲಹೆ ಮತ್ತು ಆಕ್ಷೇಪಣೆಗಳಿದ್ದಲ್ಲಿ ಸಂಬಂಧಪಟ್ಟ ತಹಶೀಲ್ದಾರರ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲೆಯ ಎಲ್ಲಾ ಮತಗಟ್ಟೆಗಳಿಗೂ ಮತಗಟ್ಟೆ ಹಂತದ ಏಜೆಂಟರನ್ನು ನೇಮಕ ಮಾಡಿ, ವಿಧಾನಸಭಾ ಕ್ಷೇತ್ರಗಳ ಮತಗಟ್ಟೆವಾರು ಮಾಹಿತಿಯನ್ನು ನೀಡುವಂತೆ ಅವರು ಹೇಳಿದರು.

2021ರ ಜನವರಿ 1ಕ್ಕೆ 18 ವರ್ಷ ತುಂಬುವ ಎಲ್ಲರೂ ಭಾರತ ಚುನಾವಣಾ ಆಯೋಗದ NVSP ( Nation Voter Service Portal ) ವೆಬ್‌ಸೈಟ್ ಮೂಲಕವು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜರಾಂ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷದ ಪ್ರತಿನಿಧಿಗಳು ಹಾಜರಿದ್ದರು.

ಕೋವಿಡ್​ ವಿಚಾರವಾಗಿ ಸಭೆ:

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ, ಡೆಡಿಕೇಟೆಡ್ ಕೋವಿಡ್ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆಮ್ಲಜನಕದ ಸರಬರಾಜಿಗೆ ಪೈಪ್‌ಲೈನ್ ಅಳವಡಿಕೆಯನ್ನು ಆ. 30 ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ವೈದ್ಯಕೀಯ ಆಮ್ಲಜನಕ ಉಪಕರಣಗಳ ಪೂರೈಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಈಗಾಗಲೇ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕದ ಅಗತ್ಯವಿರುವ ಸೋಂಕಿತರ ಸಂಖ್ಯೆ ಮಿತಿಗಿಂತಲೂ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ತಾಲ್ಲೂಕು ಆಸ್ಪತ್ರೆಗಳಲ್ಲಿಯೂ ಸಹ ವೆಂಟಿಲೇಟರ್ ಸೌಲಭ್ಯವುಳ್ಳ ಕೋವಿಡ್ ಚಿಕಿತ್ಸೆ ನೀಡಬೇಕಾದ ಪರಿಸ್ಥಿತಿ ಉಂಟಾಗುತ್ತಿರುವುದರಿಂದ ಜಿಲ್ಲೆಗೆ ಆಕ್ಸಿಜನ್​ ಪೂರೈಕೆಯಲ್ಲಿ ಕೊರತೆಯುಂಟಾಗದಂತೆ ನಿಗಾ ವಹಿಸಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.