ETV Bharat / state

ತೆಂಗು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಲು ಸರ್ಕಾರಕ್ಕೆ ಮನವಿ ಸಲ್ಲಿಕೆ - DC R Hirish

ತೆಂಗು ಬೆಳೆಗಾರರಿಗೆ ಸಾಕಷ್ಟು ನಷ್ಟ ಉಂಟಾಗಿದ್ದು, ಅವರಿಗೆ ಸೂಕ್ತ ಬೆಂಬಲ ಬೆಲೆ ದೊರೆಯಬೇಕು. ಈ ನಿಟ್ಟಿನಲ್ಲಿ ಶಾಸಕರೊಡನೆ ಸಭೆ ನಡೆಸಲಾಗಿದ್ದು, ಅಗತ್ಯ ಬೆಂಬಲ ಬೆಲೆ ನಿಗದಿಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ತೆಂಗು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಲು ಸರ್ಕಾರಕ್ಕೆ ಮನವಿ ಸಲ್ಲಿಕೆ

author img

By

Published : Jun 5, 2020, 8:22 AM IST

ಹಾಸನ: ಕಳೆದ ವರ್ಷಕ್ಕೆ ಹೋಲಿಸಿದರೆ ಕೊಬ್ಬರಿ ಬೆಲೆಯು ಈ ವರ್ಷ ಬಹಳಷ್ಟು ಇಳಿಮುಖವಾಗಿದೆ. ಇದರಿಂದ ತೆಂಗು ಬೆಳೆಗಾರರಿಗೆ ಸಾಕಷ್ಟು ನಷ್ಟ ಉಂಟಾಗಿದ್ದು, ಅವರಿಗೆ ಸೂಕ್ತ ಬೆಂಬಲ ಬೆಲೆ ದೊರೆಯಬೇಕು. ಈ ನಿಟ್ಟಿನಲ್ಲಿ ಶಾಸಕರೊಡನೆ ಸಭೆ ನಡೆಸಲಾಗಿದ್ದು, ಅಗತ್ಯ ಬೆಂಬಲ ಬೆಲೆ ನಿಗದಿಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 83,000 ಹೆಕ್ಟೇರ್ ಪ್ರದೇಶಗಳಲ್ಲಿ ತೆಂಗು ಬೆಳೆಯಲಾಗುತ್ತದೆ. ಜಿಲ್ಲೆಯಲ್ಲಿ ಪ್ರತಿ ವರ್ಷ ಸುಮಾರು 4ಲಕ್ಷ ಕ್ವಿಂಟಾಲ್‌ನಷ್ಟು ಕೊಬ್ಬರಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಕೊಬ್ಬರಿ ಬೆಲೆ ಇಳಿಕೆಯಾಗಿರುವುದರಿಂದ ರೈತರಿಗೆ ಬಹಳಷ್ಟು ನಷ್ಟವಾಗಿದೆ ಎಂದರು.

ತೆಂಗು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಲು ಸರ್ಕಾರಕ್ಕೆ ಮನವಿ ಸಲ್ಲಿಕೆ

ತೆಂಗು ಬೆಳೆಗಾರರಿಗೆ ಸೂಕ್ತ ಬೆಲೆ ದೊರಕಬೇಕು ಎನ್ನುವ ನಿಟ್ಟಿನಲ್ಲಿ ಶಾಸಕ ಸಿ.ಎನ್ ಬಾಲಕೃಷ್ಣ ಮತ್ತು ಕೆ.ಎಂ ಶಿವಲಿಂಗೇಗೌಡ ಹಾಗೂ ಇತರೆ ಅಧಿಕಾರಿಗಳೊಡನೆ ಸಭೆ ನಡೆಸಲಾಗಿದೆ. ಕಳೆದ ವರ್ಷ ಕೊಬ್ಬರಿಯ ಬೆಲೆ 15,000 ರಿಂದ17,000 ದಷ್ಟು ಇತ್ತು. ಆದರೆ ಈ ವರ್ಷ ಕಳೆದ ಎರಡು ತಿಂಗಳಿನಲ್ಲಿ 9,600 ರೂಪಾಯಿ ಇದೆ. ಹಾಗಾಗಿ ಕೇಂದ್ರ ಸರ್ಕಾರ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಿ ರೈತರ ಸಂಕಷ್ಟ ನಿವಾರಿಸಬೇಕು. ಇದರ ಜೊತೆಗೆ ರಾಜ್ಯ ಸರ್ಕಾರ ಕಳೆದ ವರ್ಷದ ಬೆಲೆ ಹಾಗೂ ಈಗಿನ ಬೆಲೆಯ ವ್ಯತ್ಯಾಸವನ್ನು ಪರಿಗಣಿಸಿ ಉಳಿಕೆ ದರವನ್ನು ಪ್ಯಾಕೇಜ್ ರೂಪದಲ್ಲಿ ನೀಡಬೇಕು ಎಂದು ಜನಪ್ರತಿನಿಧಿಗಳೊಡನೆ ಸಭೆ ನಡೆಸಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಶಾಸಕ ಕೆ.ಎಂ ಶಿವಲಿಂಗೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಅರಸೀಕೆರೆ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನಲ್ಲೇ ಹೆಚ್ಚು ತೆಂಗು ಬೆಳೆಗಾರರಿದ್ದು, ಕಳೆದ ವರ್ಷದ ಡಿಸೆಂಬರ್ ತಿಂಗಳಿನಿಂದಲೇ ಕೊಬ್ಬರಿ ಬೆಲೆ ಇಳಿಮುಖವಾಗಿದೆ. ಹಿಂದೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟಗಳ ಮೂಲಕ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸಲಾಗುತ್ತಿತ್ತು. ಅದೇ ರೀತಿ ಈಗಲೂ ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ಅನುಕೂಲವಾಗುವಂತೆ ಸೂಕ್ತ ಬೆಂಬಲ ಬೆಲೆ ನೀಡಬೇಕು. ಇದರ ಜೊತೆಗೆ ರಾಜ್ಯ ಸರ್ಕಾರ ಇತರೆ ಬೆಳೆಗಳಿಗೆ ಪ್ರೋತ್ಸಾಹ ಧನ ನೀಡುವಂತೆ ಕೊಬ್ಬರಿಗೂ ಸಹ ಪ್ರೋತ್ಸಾಹ ಧನ ನೀಡಬೇಕು ಎಂದರು.

ಶಾಸಕ ಸಿ.ಎನ್ ಬಾಲಕೃಷ್ಣ ಮಾತನಾಡಿ, ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟಗಳ ಮೂಲಕ ಕೊಬ್ಬರಿಗೆ 10,300 ರೂ.ಗಳ ಬೆಂಬಲ ಬೆಲೆ ನಿಗದಿಪಡಿಸಿದೆ. ಈ ಬೆಂಬಲ ಬೆಲೆಯನ್ನು 2000 ರೂ.ಗಳಷ್ಟು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದರ ಜೊತೆಗೆ, ರಾಜ್ಯ ಸರ್ಕಾರವು ರೈತರಿಗೆಂದೇ ಬಿಡುಗಡೆ ಮಾಡಿರುವ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್‌ನಲ್ಲಿ ಕೊಬ್ಬರಿಗೂ ಸಹ ಕನಿಷ್ಟ 4000 ರೂ.ಗಳ ವಿಶೇಷ ಪ್ಯಾಕೇಜ್ ನೀಡಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.