ETV Bharat / state

ಡಿಕೆಶಿ ಪ್ರತಿಜ್ಞಾ ಕಾರ್ಯಕ್ರಮಕ್ಕೆ ಪ್ರತಿ ಬೂತ್​​ ಮಟ್ಟದಲ್ಲೂ ಪೂರ್ವಭಾವಿ ಸಿದ್ಧತೆ..

ನಮ್ಮಕಾಂಗ್ರೆಸ್ ಪಕ್ಷವನ್ನ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲೂ ಸಹ ಪಕ್ಷವನ್ನು ಸಧೃಡಗೊಳಿಸುವ ಸಂಕಲ್ಪ ಮಾಡುತ್ತೇವೆ..

Hassan District Block Congress President Jagal manjunath satement
ಪ್ರತಿಜ್ಞಾ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಪ್ರತಿ ಬೂತ್​​ ಮಟ್ಟದಲ್ಲೂ ಸಿದ್ಧತೆ: ಜಾವ್​ಗಲ್​ ಮಂಜುನಾಥ್
author img

By

Published : Jun 28, 2020, 9:52 PM IST

ಅರಕಲಗೂಡು(ಹಾಸನ): ಕೊಣನೂರು ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಲಾಗವುದು. ಜುಲೈ 2ನೇ ತಾರೀಖಿನಂದು ಪ್ರತಿಜ್ಞಾ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ತಾಲ್ಲೂಕಿನ ಪ್ರತೀ ಬೂತ್ ಮಟ್ಟದಲ್ಲೂ ಸಿದ್ಧತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ಜಾವ್​ಗಲ್​ ಮಂಜುನಾಥ್​ ಹೇಳಿದ್ದಾರೆ.

ಪಟ್ಟಣದ ಪರಿವೀಕ್ಷಣ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 2ಕ್ಕೆ ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್​ ಅಧಿಕಾರ ಸ್ವೀಕರಿಸುತ್ತಿದ್ದು, ಅಂದಿನ ಪ್ರತಿಜ್ಞಾ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗದಿಂದ ಲಕ್ಷಾಂತರ ಕಾರ್ಯಕರ್ತರು ಪ್ರತಿಜ್ಞೆಯನ್ನು ಸ್ವೀಕರಿಸಲಿದ್ದಾರೆ. ದೇಶದ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನಿಷ್ಠಾವಂತ ಕಾರ್ಯಕರ್ತರು ಹೊಸ ಉತ್ಸಾಹದೊಂದಿಗೆ ಶ್ರಮಿಸಲಿದ್ದಾರೆ.

ನಮ್ಮಕಾಂಗ್ರೆಸ್ ಪಕ್ಷವನ್ನ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲೂ ಸಹ ಪಕ್ಷವನ್ನು ಸಧೃಡಗೊಳಿಸುವ ಸಂಕಲ್ಪ ಮಾಡುತ್ತೇವೆ ಎಂದರು.

ಅರಕಲಗೂಡು ತಾಲ್ಲೂಕಿನ ಬ್ಲಾಕ್​ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ತಾಲ್ಲೂಕಿನ ಬ್ಲಾಕ್​ ಕಾಂಗ್ರೆಸ್ ನೇತೃತ್ವದಲ್ಲಿ ಜುಲೈ 2ರ ಗುರುವಾರದಂದು ಪ್ರತಿಜ್ಞಾ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮವನ್ನು ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ವೀಕ್ಷಣೆ ಮಾಡಿ, ಕಾರ್ಯಕರ್ತರುಗಳಿಗೆ ಆತ್ಮಸ್ಥೈರ್ಯತುಂಬುವ ಕೆಲಸ ಮಾಡಲಾಗುತ್ತಿದೆ. ಸಮಾಜದಲ್ಲಿ ಸೌಹಾರ್ದತೆ ಮೂಡಿಸಲು, ಪಕ್ಷದ ಸಂವಿಧಾನ, ತತ್ವ-ಸಿದ್ದಾಂತ, ಜಾತ್ಯತೀತ ನಿಲುವು ಮತ್ತು ಸಾಮಾಜಿಕ ನ್ಯಾಯಗಳನ್ನ ಜಾರಿಗೆ ತರಲು ರಾಜ್ಯಮಟ್ಟದ ನಾಯಕರುಗಳು ಹಗಲಿರುಳು ಶ್ರಮಿಸುತ್ತಿದ್ದಾರೆ.

ಅವರ ಜೊತೆಗೆ ನಾವೆಲ್ಲರೂ ಕೈಜೋಡಿಸಿ, ಕಾಂಗ್ರೆಸ್​ ಪಕ್ಷವನ್ನ ಅಧಿಕಾರಿಕ್ಕೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ತಾಲ್ಲೂಕಿನಲ್ಲಿ ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಡದೆ, ಸಾಮಾನ್ಯ ಕಾರ್ಯಕರ್ತರೂ ಸಹ ಎಲ್ಲರಷ್ಟೇ ಸರಿ ಸಮಾನವಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ತಿಳಿಸಿದರು.

ತೈಲ ಬೆಲೆ ಏರಿಕೆಯ ವಿರುದ್ಧ ಹೋರಾಟ: ಕಳೆದ ಹತ್ತು ದಿನಗಳಿಂದ ಪೆಟ್ರೋಲ್ ಮತ್ತು ಡೀಸಡಲ್ ಬೆಲೆ ಏರಿಕೆ ಮಾಡುತ್ತಿದ್ದು, ಇದರಿಂದ ಜನಸಾಮಾನ್ಯರಿಗೆ ದೊಡ್ಡ ಹೊರೆಯಾಗಿದೆ. ಕೊರೊನಾ ವೈರಸ್​ನಿಂದ ಈಗಾಗಲೇ ಕಂಗೆಟ್ಟಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದ ಹಾಗಾಗಿದೆ. ಹೀಗಾಗಿ ಮುಂದಿನ ವಾರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟ ಮಾಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲೂ ಸಹ ಪೆಟ್ರೋಲ್ ಮತ್ತು ಡೀಸೆಲ್ ಏರಿಕೆಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.