ಹಾಸನ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆದೇಶ ಜಾರಿಕಾಕರು ಮತ್ತು ಜವಾನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 43 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದ್ದು, ಎಸ್ಎಸ್ಎಲ್ಸಿ ಓದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಮತ್ತಿತರ ವಿವರ ಇಲ್ಲಿದೆ.
ಹುದ್ದೆ ವಿವರ: ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ ಜಾರಿಕಾರಕ- 11 ಮತ್ತು ಜವಾನ 32 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿದ್ದು, ಕನ್ನಡ ಭಾಷೆಯನ್ನು ಬರೆಯಲು ಮತ್ತು ಓದಲು ಬರೆಯಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಹಾಗೂ ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ: ಆದೇಶ ಜಾರಿಕಾರರ ಹುದ್ದೆಗೆ 19,950-37,900, ಜವಾನ ಹುದ್ದೆಗೆ 17,000-28,950 ರೂ. ವೇತನ ನಿಗದಿಸಲಾಗಿದೆ.
ಅರ್ಜಿ ಸಲ್ಲಿಕೆ ವಿವರ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ. ಉಳಿದ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ಭರಿಸಬೇಕಿದೆ. ಈ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು.
ಈ ಹುದ್ದೆಗಳಿಗೆ ಸೆಪ್ಟೆಂಬರ್ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 3 ಆಗಿದೆ, ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಅಕ್ಟೋಬರ್ 5 ಆಗಿದೆ.
ಈ ಹುದ್ದೆ ಕುರಿತ ಅಧಿಕೃತ ಅಧಿಸೂಚನೆ ಮತ್ತು ಇನ್ನಿತರ ಮಾಹಿತಿ ಪಡೆಯಲು ಅಭ್ಯರ್ಥಿಗಳು hassan.dcourts.gov.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ: SSC Recruitment: ಕೇಂದ್ರದ ವಿವಿಧ ಇಲಾಖೆಗಳಲ್ಲಿ 384 ಸ್ಟೆನೋಗ್ರಾಫರ್ ಹುದ್ದೆಗೆ ನೇಮಕಾತಿ