ETV Bharat / state

ಹಾಸನ: ಮಾದಕ ವಸ್ತು ಬಳಕೆಯಿಂದಾಗುವ ಹಾನಿ ಕುರಿತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ - Drug addiction

ಮಾದಕ ವಸ್ತು ವ್ಯಸನ ಮಾಡುವುದು ಶಿಕ್ಷಾರ್ಹ ಅಪರಾಧ. ಮಕ್ಕಳು ಹಾಗೂ ಯುವಕರು ಮಾದಕ ವ್ಯಸನಿಗಳಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರಚಾರ ಕಾರ್ಯಕ್ರಮ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Hassan: District Started awareness program on drug harm
ಹಾಸನ: ಮಾದಕ ವಸ್ತು ಬಳಕೆಯಿಂದಾಗುವ ಹಾನಿ ಕುರಿತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
author img

By

Published : Jun 26, 2020, 8:27 PM IST

ಹಾಸನ: ಕೆಲವರು ಮಾದಕ ವಸ್ತುಗಳ ವ್ಯಸನಕ್ಕೆ ಮಾರು ಹೋಗುತ್ತಿರುವುದರಿಂದ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗುವುದರ ಜೊತೆಗೆ ಕುಟುಂಬದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಇದನ್ನು ಬಳಕೆ ಮಾಡುವುದು ಶಿಕಾರ್ಹ ಅಪರಾಧ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.​ ​ ​ ​ ​ ​

ಹಾಸನ: ಮಾದಕ ವಸ್ತು ಬಳಕೆಯಿಂದಾಗುವ ಹಾನಿ ಕುರಿತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂತರರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ವಾಹನದಲ್ಲಿ ಭಿತ್ತಿಚಿತ್ರ ಅಳವಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಾಹನವು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಸಂಚರಿಸಿ ಧ್ವನಿವರ್ಧಕಗಳ ಮೂಲಕ ಹಾಗೂ ಭಿತ್ತಿ ಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು. ಅಲ್ಲದೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಹಲವಾರು ಯೋಜನೆಗಳಿದ್ದು, ಮಾದಕ ವ್ಯಸನಿಗಳು ವ್ಯಸನದಿಂದ ಹೊರ ಬರಲು ಉಚಿತ ಚಿಕಿತ್ಸೆಯನ್ನೂ ಸಹ ನೀಡಲಾಗುತ್ತಿದೆ ಎಂದರು.

ಮಾದಕ ವಸ್ತು ವ್ಯಸನ ಮಾಡುವುದು ಶಿಕ್ಷಾರ್ಹ ಅಪರಾಧ. ಮಕ್ಕಳು ಹಾಗೂ ಯುವಕರು ಮಾದಕ ವ್ಯಸನಿಗಳಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರಚಾರ ಕಾರ್ಯಕ್ರಮ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

​ಡಿಎಚ್‌ಒ ಡಾ. ಸತೀಶ್ ಮಾತನಾಡಿ, ಸಾರ್ವಜನಿಕರಲ್ಲಿ ಮಾದಕ ವ್ಯಸನದಿಂದಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಪ್ರಚಾರ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ, ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.