ETV Bharat / state

ಹಾಸನ ಜಿಲ್ಲೆಯಲ್ಲಿಂದು 126 ಜನರಿಗೆ ಕೊರೊನಾ, ಓರ್ವ ಸೋಂಕಿತ ಸಾವು...

ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲಾರು ಸಹಕರಿಸಬೇಕೆಂದು ಆರೋಗ್ಯಾಧಿಕಾರಿ ಸತೀಶ್ ಮನವಿ ಮಾಡಿದರು.

hassan-district-today-corona-news
ಹಾಸನ ಜಿಲ್ಲೆಯಲ್ಲಿಂದು 126 ಜನರಿಗೆ ಕೊರೊನಾ, ಓರ್ವ ಸೋಂಕಿತ ಸಾವು...
author img

By

Published : Oct 28, 2020, 5:50 PM IST

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 126 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 24,586ಕ್ಕೆ ಏರಿಕೆಯಾಗಿದೆ. ಒಂದು ಸಾವಿನೊಂದಿಗೆ ಮೃತರ ಸಂಖ್ಯೆ 418 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿಂದು 126 ಜನರಿಗೆ ಕೊರೊನಾ, ಓರ್ವ ಸೋಂಕಿತ ಸಾವು...

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 252 ಜನರು ಸೇರಿ ಈವರೆಗೆ 22,865 ಮಂದಿ ಗುಣಮುಖರಾಗಿದ್ದಾರೆ. 1203 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 42 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಲೂಕುವಾರು ಪ್ರಕರಣ:

hassan-district-today-corona-news
ಹಾಸನ ಜಿಲ್ಲೆಯಲ್ಲಿಂದು 126 ಜನರಿಗೆ ಕೊರೊನಾ, ಓರ್ವ ಸೋಂಕಿತ ಸಾವು...

ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-8, ಅರಕಲಗೂಡು-6, ಅರಸೀಕೆರೆ-2, ಬೇಲೂರು-3, ಚನ್ನರಾಯಪಟ್ಟಣ-37, ಹಾಸನ-53, ಹೊಳೆನರಸೀಪುರ-14, ಸಕಲೇಶಪುರ-2, ಇತರೆ- 1 ಒಟ್ಟು 126 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಆರೋಗ್ಯಧಿಕಾರಿ ಮನವಿ:

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೇ, ಹಿಮ್ಸ್ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರು ಸಹಕರಿಸಬೇಕೆಂದು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.