ಹಾಸನ: ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದವರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಕಗ್ಗಲಿ ಕಾವಲು ಗ್ರಾಮದ ನಿವಾಸಿ ನಿವೃತ್ತ ಟೆಲಿಫೋನ್ ಸಿಬ್ಬಂದಿ ಜಯರಾಂ ಎಂಬುವರ ಪತ್ನಿಯ ಅಂತ್ಯ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಿಢೀರ್ ದಾಳಿ ಮಾಡಿದೆ. ಹೆಜ್ಜೇನು ದಾಳಿಯಿಂದ 15ಕ್ಕೂ ಹೆಚ್ಚು ಮಂದಿ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜನಹಿತ ಕನ್ನಡ ದಿನಪತ್ರಿಕೆಯ ಸಂಪಾದಕ ಜಗದೀಶ್ ಚೌಡುವಳ್ಳಿ ಕೂಡ ಹೆಜ್ಜೇನು ದಾಳಿಗೆ ತುತ್ತಾಗಿ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.