ಹಾಸನ:ಹಾಸನ ಲೋಕಸಭಾ ಕ್ಷೇತ್ರ ಮತ್ತಷ್ಟು ರಂಗೇರಿದ್ದು, ಅಭ್ಯರ್ಥಿಗಳ ಅಂತಿಮ ಪಟ್ಟಿ ಘೋಷಣೆ ಮುನ್ನವೇ ಅಭ್ಯರ್ಥಿಗಳ ಮತ ಬೇಟೆ ಜೋರಾಗಿದೆ.
ಬೆಳಗ್ಗೆ ಹೊಳೆನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮತ್ತು ಕುಟುಂಬದವರು ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿಯಾಗಿ ಎ.ಮಂಜು ಅಧಿಕೃತ ಘೋಷಣೆ ಸಾಧ್ಯತೆ ಹೆಚ್ಚಿದೆ.
ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಅಂತಿಮ ನಿರ್ಧಾರ ಎದುರು ನೋಡುತ್ತಿದ್ದ ಎ. ಮಂಜು, ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಎಂಬುದು ಫಿಕ್ಸ್ ಆದ ಹಿನ್ನಲೆಯಲ್ಲಿ ಮಂಜು ಪಕ್ಷಾಂತರಕ್ಕೂ ಕ್ಷಣಗಣನೆ ಆರಂಭವಾಗಿದೆ.
ಈಗಾಗಲೇ ಹಲವು ಬಾರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಮಾಜಿ ಸಚಿವ ಎ. ಮಂಜು, ನಿನ್ನೆ ಖಾಸಗಿ ಹೋಟೆಲ್ನಲ್ಲಿ ಕಾರ್ಯಕರ್ತರೊಂದಿಗೆ ರಹಸ್ಯ ಸಭೆ ನಡೆಸಿ ಜೆಡಿಎಸ್ ವಿರುದ್ಧ ಸಂಘಟಿತ ಹೋರಾಟಕ್ಕೆ ರೂಪುರೇಷೆ ಸಿದ್ಧಪಡಿಸಿದ್ದಾರೆ ಎನ್ನಲಾಗ್ತಿದೆ.
ಮಂಜು ಜೊತೆ ಮತ್ತೋರ್ವ ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಬಿಜೆಪಿ ಸೇರ್ಪಡೆ ಸಾಧ್ಯತೆ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ಸ್ಪರ್ಧಿಸಿ ಮಂಜೇಗೌಡ ಸೋಲನುಭವಿಸಿದ್ದರು.