ETV Bharat / state

ಈ ಬಾರಿಯೂ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಹಾಸನ ಪ್ರಥಮ ಸ್ಥಾನ ಗಳಿಸಬೇಕು: ಕೆ. ಗೋಪಾಲಯ್ಯ - K Gopalya Minister in charge of Hassan

ಸುರಕ್ಷತಾ ಕ್ರಮಗಳನ್ನು ಕೈಗೊಂಡು ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

Hassan must top first in state  in SSLC examination: K. Gopalya
ಈ ಬಾರಿಯೂ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಹಾಸನ ರಾಜ್ಯದಲ್ಲೇ ಪ್ರಥಮ ಬರಬೇಕು: ಕೆ. ಗೋಪಾಲಯ್ಯ
author img

By

Published : Jun 18, 2020, 4:57 PM IST

ಹಾಸನ: ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

ಈ ಬಾರಿಯೂ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಹಾಸನ ರಾಜ್ಯದಲ್ಲೇ ಪ್ರಥಮ ಬರಬೇಕು: ಕೆ. ಗೋಪಾಲಯ್ಯ

ನಗರದ ಸಂತ ಜೋಸೆಫ್ ಶಾಲೆಯ ಸಭಾಂಗಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜಿಲ್ಲೆಯ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಪರೀಕ್ಷೆಗೂ ಮುನ್ನ ಎಲ್ಲಾ ಶಾಲೆಗಳನ್ನು ಸ್ಯಾನಿಟೈಸ್ ಮಾಡಿ, ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿ ಆರೋಗ್ಯ ತಪಾಸಣೆ ಮಾಡಿ ಪರೀಕ್ಷೆ ನಡೆಸಲಾಗುವುದು. ಜಿಲ್ಲಾಡಳಿತ ಇದಕ್ಕೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ನಡೆಸಿದೆ ಎಂದರು.

ಕಳೆದ ಬಾರಿ ಜಿಲ್ಲೆಯು ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದು, ಈ ಬಾರಿಯೂ ಅದೇ ರೀತಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಜಿಲ್ಲೆಯನ್ನು ಪುನಃ ಪ್ರಥಮ ಸ್ಥಾನದಲ್ಲೇ ಉಳಿಯುವಂತೆ ಮಾಡಲು ಶಿಕ್ಷಕರು ತಮ್ಮ ಸಂಪೂರ್ಣ ಶ್ರಮ ಹಾಕಬೇಕು ಎಂದು ಹೇಳಿದರು. ಉತ್ತಮ ಪಲಿತಾಂಶಕ್ಕಾಗಿ ಶ್ರಮಿಸುವ ಶಿಕ್ಷಕರಿಗೆ ಹಾಗೂ ಉತ್ತಮ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿಗಳ ಬಹುಮಾನ ನೀಡುವುದಾಗಿ ಘೋಷಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು, ತಮ್ಮ ಎಲ್ಲ ವಿದ್ಯಾರ್ಥಿಗಳ ಕ್ಷಮತೆ ಶಿಕ್ಷಕರಿಗೆ ತಿಳಿದಿರುತ್ತದೆ. ಪರೀಕ್ಷೆಗೆ ಕೇವಲ ಕೆಲವು ದಿನಗಳು ಮಾತ್ರ ಬಾಕಿ ಇದ್ದು, ಶಿಕ್ಷಕರು ವಿದ್ಯಾರ್ಥಿಗಳೊಡನೆ ನಿರಂತರ ಸಂಪರ್ಕದಲ್ಲಿದ್ದು, ಪರೀಕ್ಷೆಯನ್ನು ಉತ್ತಮವಾಗಿ ಬರೆಯಲು ಆತ್ಮಸ್ಥೈರ್ಯ ತುಂಬಬೇಕು ಎಂದು ಸಲಹೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್ ಸಿಂಧ್ಯಾ ಮಾತನಾಡಿ, ರಾಜ್ಯ ಸರ್ಕಾರದ ಕೋವಿಡ್ ನಿಯಂತ್ರಣಾ ಕ್ರಮಗಳಂತೆ ಪರೀಕ್ಷೆ ನಡೆಸಲು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ವಹಿಸಿರುವ ಮುಂಜಾಗ್ರತಾ ಕ್ರಮಗಳನ್ನು ಪ್ರಶಂಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮೂಲಕ 1 ಕೋಟಿ ಮಾಸ್ಕ್​ಗಳನ್ನು ತಯಾರಿಸಿ ಶಾಲೆಗಳಿಗೆ ವಿತರಿಸಲಾಗಿದೆ ಎಂದರಲ್ಲದೆ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಹ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರು ತಮ್ಮ ಸೇವೆಯನ್ನು ಒದಗಿಸಲಿದ್ದಾರೆ. ಈ ಕಾರ್ಯದಲ್ಲಿ ಎಲ್ಲರ ಸಹಕಾರ ಅತ್ಯವಶ್ಯಕ ಎಂದರಲ್ಲದೆ ಅತ್ಯಂತ ಜಾಗರೂಕತೆಯಿಂದ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸುತ್ತಿರುವ ಸರ್ಕಾರ ಹಾಗೂ ಎಲ್ಲ ಅಧಿಕಾರಿಗಳ ಪರಿಶ್ರಮ ಶ್ಲಾಘನೀಯ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.