ಹಾಸನ: ಈವರೆಗೆ ಜಿಲ್ಲೆಯಲ್ಲಿ ಒಂದೂ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ಕೊರೊನಾ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಇದುವರೆಗೆ 2,403 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರಲ್ಲಿ 828 ಜನ ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ಶಂಕಿತರು ಹಾಗೂ 109 ಜನ ವಿದೇಶಿಯರಿದ್ದಾರೆ. ಶೀತ, ನೆಗಡಿ, ಕೆಮ್ಮು ಇರುವ 1,377 ವ್ಯಕ್ತಿಗಳನ್ನು ಪರೀಕ್ಷಿಸಲಾಗಿದೆ. 10 ದಿನದಿಂದ ಜ್ವರ, ಕೆಮ್ಮು, ನೆಗಡಿ ಕಂಡು ಬಂದಿರುವ 89 ವ್ಯಕ್ತಿಗಳನ್ನು ಪರೀಕ್ಷಿಸಲಾಗಿದೆ. 2,362 ಜನರ ಗಂಟಲ ದ್ರವವನ್ನು ಪರೀಕ್ಷೆಗೆ ಒಳಪಡಿಸಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿವೆ.
87 ಜನರನ್ನು 14 ದಿನಗಳ ಹೋಂ ಕ್ವಾರಂಟೈನ್ನಲ್ಲಿಡಲಾಗಿದೆ. 25 ಮಂದಿಯನ್ನು 28 ದಿನಗಳವರೆಗೆ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, ಪ್ರತಿನಿತ್ಯ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. 467 ಜನ 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. 26 ಜನ ಆಸ್ಪತ್ರೆಯ ಐಸೊಲೇಷನ್‍ನಲ್ಲಿ ಇದ್ದಾರೆ. 899 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.