ಹಾಸನ: ರಾಷ್ಟ್ರೀಯ ಹೆದ್ದಾರಿ 75ರ ಹದಗೆಟ್ಟಿರುವ ರಸ್ತೆಗೆ ಮರು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಪಡೆಯಲಾಗಿದೆ.
ಹಾಸನ-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರ ನಡುವಿನ ಬಾಳ್ಳುಪೇಟೆಯಲ್ಲಿ ಹದಗೆಟ್ಟಿರುವ ರಸ್ತೆಗೆ ಮರು ಡಾಂಬರೀಕರಣ ಮಾಡಬೇಕೆಂದು ವಿವಿಧ ಸಂಘಟನೆಗಳು 5 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ರಸ್ತೆ ಹದಗೆಟ್ಟಿರುವುದು ಈಗಾಗಲೇ ತನ್ನ ಗಮನಕ್ಕೆ ಬಂದಿದ್ದು, ಮಳೆ ನಿಂತ ತಕ್ಷಣವೇ ಮರು ಡಾಂಬರೀಕರಣ ಕಾಮಗಾರಿ ಆರಂಭಿಸುತ್ತೇವೆಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಭರವಸೆ ನೀಡಿದರು. ಸಚಿವರ ಭರವಸೆಯ ಮೇರೆಗೆ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.
ಇದಕ್ಕೂ ಮುನ್ನ ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಬೇಕು ಎಂದು ಪಟ್ಟುಹಿಡಿದಿದ್ದರು. ಹಾಗಾಗಿ ಪ್ರತಿಭಟನೆಯ ಕಾರಣವೆನೆಂಬುದನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಸ್ಥಳೀಯ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಜಿಲ್ಲಾ ಉಸ್ತುವಾರಿ ಮಂತ್ರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಹಾಗಾಗಿ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರನ್ನ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಸಚಿವರು ಮನವಿ ಮಾಡಿದ್ರು.