ಹಾಸನ: ದೇಶದೆಲ್ಲೆಡೆ ಕೊರೊನಾ ಸೋಂಕು ತನ್ನ ಕರಾಳ ರೂಪವನ್ನು ತೋರುತ್ತಿದ್ದು, ರಾಜ್ಯದ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಯೂ ಅಂಗಡಿ ಮುಂಗಟ್ಟು, ಮಾಲ್‍ಗಳನ್ನು ಮುಚ್ಚಲಾಗಿದೆ. ಜಾತ್ರೆಗಳು, ಮದುವೆ ಸಮಾರಂಭಗಳಲ್ಲಿ ಕಡಿಮೆ ಜನ ಸೇರುವಂತೆ ಜಾಗೃತಿ ಮೂಡಿಸುವ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆರ್ ತಿಳಿಸಿದರು.
ಕೊರೊನಾ ಸಂಬಂಧವಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೂ ರಜೆ ನೀಡಲಾಗಿದೆ ಆದರೆ ಜಿಲ್ಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿಯೇ ಇದೆ, ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆಯುತ್ತಿವೆ. ವಾಹನ ಸವಾರರು ಹೆಲ್ಮೆಟ್ ಧರಿಸದೆ ಚಲಾವಣೆ ಮಾಡುತ್ತಿದ್ದಾರೆ ಹಾಗಾಗಿ ಕಡ್ಡಾಯವಾಗಿ ಹೆಲ್ಮೇಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಆ ಮೂಲಕ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು ಎಂದು ಹೇಳಿದರು. ಕೊರೊನಾ ಭೀತಿ ಕಡಿಮೆಯಾಗುವವರೆಗೂ ಜನರು ಜಾತ್ರೆ, ಸಮಾರಂಭಗಳಿಗೆ ಹೋಗುವುದನ್ನು ನಿಲ್ಲಿಸಬೇಕು ಎಂದು ಜಾಗೃತಿ ಮೂಡಿಸಿದರು.