ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ದೇವಾಲಯದ ಬಾಗಿಲು ತೆರೆದಿದ್ದು, ಎರಡನೇ ದಿನವಾದ ಇಂದು ತಾಯಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.
ದೇಗುಲದ ಬಾಗಿಲು ತೆರೆದ ಮೊದಲ ದಿನವಾದ ಗುರುವಾರ ವಿಶೇಷ ಪೂಜಾ ಕೈಂಕರ್ಯ ಹಾಗೂ ನೈವೇದ್ಯ ಕಾರ್ಯಕ್ರಮದಿಂದಾಗಿ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ನಾಡಿನಾದ್ಯಂತ ಹೆಸರುವಾಸಿಯಾಗಿರುವ ಹಾಸನಾಂಬೆಯ ದರ್ಶನಕ್ಕೆ ಇಂದು ಬೆಳಗಿನ ಜಾವ 3 ಗಂಟೆಯಿಂದಲೇ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಗಂಟೆಗಟ್ಟಲೆ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಹರಕೆ ಹೊತ್ತ ಮಹಿಳೆಯರು ಹಸಿರು ಸೀರೆ, ಬಳೆ, ಮಡಲಕ್ಕಿಯನ್ನು ದೇವಿಗೆ ಸಮರ್ಪಿಸಿ ಭಕ್ತಿಯಿಂದ ಮಿಂದೇಳುತ್ತಿದ್ದಾರೆ.