ETV Bharat / state

ಹಾಸನ ವಿಮಾನ ನಿಲ್ದಾಣಕ್ಕೆ ಈ ಬಾರಿ ಬಜೆಟ್​ನಲ್ಲಿ ಗ್ರೀನ್​ ಸಿಗ್ನಲ್​ ಸಿಗುತ್ತೆ: ದೇವೇಗೌಡ

ಜಿಲ್ಲೆಯಲ್ಲಿ ಏರ್​​ಪೋರ್ಟ್, ಚನ್ನಪಟ್ಟಣ ಕೆರೆ ಅಭಿವೃದ್ಧಿಗೆ ಬಜೆಟ್​​​ನಲ್ಲಿ ಹಣ ಬಿಡುಗಡೆ ಆಗಲಿದೆ ಎಂದು ಅಧಿಕಾರಿಗಳು ನನಗೆ ವಿಷಯ ತಿಳಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಹಕಾರ ನೀಡಲಿದ್ದಾರೆ ಎಂಬ ಭರವಸೆ ನನಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

Former PM HD Devegowda
ಹೆಚ್.ಡಿ. ದೇವೇಗೌಡ
author img

By

Published : Feb 26, 2021, 7:50 PM IST

ಹಾಸನ: ಮುಂಬರುವ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹಾಸನ ಜಿಲ್ಲೆಯ ಅಭಿವೃದ್ಧಿ ಕೆಲಸಕ್ಕೆ ಒತ್ತು ಕೊಡುವ ಮನಸ್ಸು ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಹೇಳಿದರು.

ಹಾಸನದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಏರ್​ಪೋರ್ಟ್, ಚನ್ನಪಟ್ಟಣ ಕೆರೆ ಅಭಿವೃದ್ಧಿಗೆ ಬಜೆಟ್​​ನಲ್ಲಿ ಹಣ ಬಿಡುಗಡೆ ಆಗಲಿದೆ ಎಂದು ಅಧಿಕಾರಿಗಳು ನನಗೆ ವಿಷಯ ತಿಳಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಹಕಾರ ನೀಡಲಿದ್ದಾರೆ ಎಂಬ ಭರವಸೆ ನನಗಿದೆ. ಎರಡು, ಮೂರು ತಿಂಗಳಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಪ್ರವಾಸ ಮಾಡುತ್ತೇನೆ ಎಂದರು.

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ

ರಾಜ್ಯಮಟ್ಟದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಪಕ್ಷ ಸಂಘಟನೆಗಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಹಲವು ಘಟಕಗಳ ಪುನರ್​ ರಚನೆ ಮಾಡಿದ್ದಾರೆ. ಜಿಲ್ಲೆಯಿಂದ ನನ್ನ ರಾಜಕಾರಣ ಶುರುವಾಗಿ 60 ವರ್ಷವಾಗಿದೆ. ನೀರಾವರಿಗಾಗಿ ಹೋರಾಟ ಮಾಡುವುದು ಕೊನೆಯ ಘಟ್ಟದ ಕೆಲಸ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶಕ್ತಿ ಮೀರಿ ಹೋರಾಟ ಮಾಡಲಾಗುವುದು. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಗುರುತಿಸಿ ಟಿಕೆಟ್ ನೀಡಲಾಗುವುದು ಎಂದರು.

ಇನ್ನು ಮಾರ್ಚ್ ಅಂತ್ಯಕ್ಕೆ ಮಹಿಳಾ ಮತ್ತು ಹಿಂದುಳಿದ ವರ್ಗಗಳ ಸಮಾವೇಶ ಮಾಡುತ್ತೇವೆ. ವಿಜಯಪುರ, ಯಾದಗಿರಿಯಲ್ಲೂ ಸಮಾವೇಶ ನಡೆಸಲಾಗುವುದು. ಮಂಗಳೂರಿನಲ್ಲಿ ಗ್ರಾಮ ಪಂಚಾಯಿತಿ ಗೆದ್ದಿದ್ದೇವೆ. ಹೈದರಾಬಾದ್ ಕರ್ನಾಟಕದಲ್ಲಿ ಶಕ್ತಿ ಇದ್ದು, ಅದನ್ನು ಹೆಚ್ಚಿಸಿಕೊಳ್ಳಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.