ETV Bharat / state

ಸಿಎಂ ಆಗಿದ್ದಾಗ ಸಿದ್ದರಾಮಯ್ಯನವರಿಗೆ ಸಮಾಜಕ್ಕೆ ಮೀಸಲಾತಿ ಕೊಡಲು ಸಾಧ್ಯವಾಗಲಿಲ್ಲ: ಹೆಚ್​ಡಿಕೆ - ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಗಳಾಗಿದ್ದರು. ಅವರ ಸಮಾಜಕ್ಕೆ ಸ್ಥಾನಮಾನ ಕಲ್ಪಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ. ಈಗ ಮೀಸಲಾತಿಗಾಗಿ ಹೋರಾಟ ಮಾಡುತ್ತೇನೆ ಎನ್ನುವುದು ಎಷ್ಟು ಸರಿ ಎನ್ನುವುದನ್ನು ಅವರೇ ಚಿಂತನೆ ಮಾಡಬೇಕು..

ಹೆಚ್.ಡಿ.ಕುಮಾರಸ್ವಾಮಿ
HD Kumaraswamy
author img

By

Published : Feb 21, 2021, 8:01 PM IST

ಹಾಸನ : ಸಮಾಜದ ಸಂಘರ್ಷಕ್ಕೆ ಎಡೆ ಮಾಡಿಕೊಡದಂತೆ ಚಿಂತನೆ ನಡೆಸಿ ಮೀಸಲಾತಿ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದನ್ನು ಅವರೇ ನಿಭಾಯಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಮೀಸಲಾತಿ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ..

ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಮೂಲ ಸೌಕರ್ಯಗಳನ್ನು ಪಡೆಯದೆ ಕೆಳಸ್ತರದಲ್ಲಿರುವ ಸಮುದಾಯಕ್ಕೆ ಮೀಸಲಾತಿ ಕೊಡಬೇಕು. ಈ ಮೂಲಕ ಅವರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢರನ್ನಾಗಿ ಮಾಡುವಂತಹ ಕಾರ್ಯ ಆಗಬೇಕು. ಆದರೆ, ಮಠಾಧೀಶರು ರಸ್ತೆಗಿಳಿದು ಪ್ರತಿಭಟನೆ ಮಾಡುವಂತಹ ಪರಿಸ್ಥಿತಿಗೆ ತಂದುಕೊಂಡಿದ್ದು ತಪ್ಪು ಎನ್ನುವುದು ನನ್ನ ಅಭಿಪ್ರಾಯ ಎಂದರು.

ಓದಿ: ಯುವತಿ ಅನುಮಾನಾಸ್ಪದ ಸಾವು; ಪಾದ್ರಿಗಳಿಬ್ಬರು ಸೇರಿ ತಂದೆ ವಿರುದ್ಧ ಪ್ರಕರಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಗಳಾಗಿದ್ದರು. ಅವರ ಸಮಾಜಕ್ಕೆ ಸ್ಥಾನಮಾನ ಕಲ್ಪಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ. ಈಗ ಮೀಸಲಾತಿಗಾಗಿ ಹೋರಾಟ ಮಾಡುತ್ತೇನೆ ಎನ್ನುವುದು ಎಷ್ಟು ಸರಿ ಎನ್ನುವುದನ್ನು ಅವರೇ ಚಿಂತನೆ ಮಾಡಬೇಕು ಎಂದರು.

ಐಎಂಎ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಶಾಸಕರೊಬ್ಬರು ಇಫ್ತಿಯಾರ್ ಊಟಕ್ಕೆ ಕರೆದುಕೊಂಡು ಹೋಗಿದ್ದರು. ಯಾವುದೇ ತನಿಖೆಗೆ ನಾನು ಸಿದ್ಧನಿದ್ದೇನೆ ಎಂದು ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.