ETV Bharat / state

ಅಭಿವೃದ್ಧಿ ವಿಚಾರದಲ್ಲಿ ಹಾಸನ ಜಿಲ್ಲೆಯ ಜನರನ್ನು ಎದುರು ಹಾಕಿಕೊಳ್ಳಬೇಡಿ: ಹೆಚ್.ಡಿ.ರೇವಣ್ಣ ಆಕ್ರೋಶ

author img

By

Published : Nov 1, 2019, 10:06 AM IST

ಅಭಿವೃದ್ಧಿ ವಿಚಾರದಲ್ಲಿ ಹಾಸನ ಜಿಲ್ಲೆಯ ಜನರನ್ನು ಎದುರು ಹಾಕಿಕೊಳ್ಳಬೇಡಿ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ

ಹಾಸನ: ಜಿಲ್ಲೆಯಲ್ಲಿ ನೀರಾವರಿ ಮತ್ತು ಇತರ ಕಾಮಗಾರಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಗಿತವಾಗಿದೆ. ಅಭಿವೃದ್ಧಿ ವಿಚಾರದಲ್ಲಿ ಜಿಲ್ಲೆಯ ಜನರನ್ನು ಎದುರು ಹಾಕಿಕೊಳ್ಳಬೇಡಿ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ

ಕಾವೇರಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಒಟ್ಟು 7,650 ಕೋಟಿ ವೆಚ್ಚದ ಕಾಮಗಾರಿಯನ್ನು ತಡೆಹಿಡಿಯಲಾಗಿದೆ. ಮೈಸೂರು ದಕ್ಷಿಣ ವಲಯದ ಮಂಡ್ಯ, ಮೈಸೂರು, ಮಡಿಕೇರಿಯಲ್ಲಿ 5,000 ಕೋಟಿ ಹೇಮಾವತಿ ವಲಯದಲ್ಲಿ ಸಾವಿರ 650 ಕೋಟಿ, ತುಮಕೂರು ವಲಯದಲ್ಲಿ 100 ಕೋಟಿ ವೆಚ್ಚದ ಕಾಮಗಾರಿಗಳು ಸ್ಥಗಿತಗೊಂಡಿವೆ. ಅಲ್ಲದೇ ಪುರಸಭೆ ಅನುದಾನವನ್ನು ತಡೆಹಿಡಿದಿದ್ದಾರೆ. ಈ ಬಗ್ಗೆ ನಿಯಮ 60 ರ ಅಡಿಯಲ್ಲಿ ಸಿಎಂ ಯಡಿಯೂರಪ್ಪನವರ ಗಮನ ಸೆಳೆಯಲಾಗಿತ್ತು. ಯಾವುದೇ ಕಾಮಗಾರಿ ನಿಲ್ಲಿಸಲ್ಲ ಎಂದು ಸಿಎಂ ಸದನದಲ್ಲೇ ಭರವಸೆ ನೀಡಿದರು. ಅವರು ನೀಡಿದ ಭರವಸೆ ಹುಸಿಯಾಗಿದೆ ಎಂದು ರೇವಣ್ಣ ದೂರಿದರು.

ಹಣಕಾಸು ಇಲಾಖೆ ಅನುಮತಿ ನೀಡಿದ ಕಾಮಗಾರಿಗಳನ್ನು ನಿಲ್ಲಿಸಿದ್ದಾರೆ. ಮತ್ತೆ ಅವರ ಗಮನಕ್ಕೆ ತರುತ್ತೇವೆ. ಅವರೇ ಸಭೆ ಕರೆದು ಕಾಮಗಾರಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಿ. ಇಲ್ಲವಾದರೆ ಮುಂದೇನು ಮಾಡಬೇಕು ಎಂಬುದನ್ನು ತೀರ್ಮಾನಿಸುತ್ತೇವೆ ಎಂದರು.

ಜನವರಿ-ಡಿಸೆಂಬರ್ ವೇಳೆಗೆ ನಾಲೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತದೆ. ಅಷ್ಟರಲ್ಲಿ ಎಲ್ಲಾ ಕೆಲಸಗಳು ಪೂರ್ಣಗೊಳ್ಳಬೇಕು. ಬೇಲೂರಿನಲ್ಲಿ 15 ಕೋಟಿ, ಸಕಲೇಶಪುರದಲ್ಲಿ 30 ಕೋಟಿ ಹಾಗೂ ಹಾಸನ ಹೊಸ ಬಸ್ ನಿಲ್ದಾಣ ಸಮೀಪ ಅಭಿವೃದ್ಧಿಗೆ ಅನುಮೋದನೆ ನೀಡಿದ 144 ಕೋಟಿ ವೆಚ್ಚದ ಕಾಮಗಾರಿಗೆ ತಡೆ ನೀಡಲಾಗಿದೆ. ಶೀಘ್ರ ಜಿಲ್ಲೆಯ ಜೆಡಿಎಸ್​ ಪಕ್ಷದ ಎಲ್ಲ ಹಾಲಿ ಶಾಸಕರು ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರೊಂದಿಗೆ ಸಿಎಂ ಅವರನ್ನು ಭೇಟಿ ಮಾಡಲಾಗುವುದು ಎಂದು ತಿಳಿಸಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ ಸಹವಾಸ ಸಾಕು ಎಂದಿದ್ದಾರೆ. ಸರ್ಕಾರ ರಚನೆ ವೇಳೆ ಅವರ ಬಳಿ ಹೋಗಿರಲಿಲ್ಲ. ರಾಹುಲ್ ಗಾಂಧಿ ಜೆಡಿಎಸ್ ಎಂದು ಹೇಳಿಕೆ ನೀಡಿದ ಪರಿಣಾಮ 20 ಸೀಟುಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹೇಳಿದರು.

ಎ.ಟಿ.ರಾಮಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ನೆರೆಹಾವಳಿಯಿಂದ ಕೆರೆ, ಸೇತುವೆ, ರಸ್ತೆಗಳು ಹಾಳಾಗಿವೆ. ಲೋಕೋಪಯೋಗಿ, ಸಣ್ಣ ನೀರಾವರಿ, ಜಿಲ್ಲಾಪಂಚಾಯಿತಿ ಸೇರಿದಂತೆ ಎಲ್ಲಾ ಇಲಾಖೆಯ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಕೆಲಸ ಮಾಡಿಸಬೇಕು ಎಂದು ಒತ್ತಾಯಿಸಿದರು.

ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಎತ್ತಿನಹೊಳೆ ಯೋಜನೆ ಸ್ಥಗಿತಗೊಂಡಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.