ETV Bharat / state

ಹಾಸನ ಜಿಲ್ಲೆಯಲ್ಲಿಂದು 87 ಕೋವಿಡ್‌ ಕೇಸ್​ ಪತ್ತೆ: ಆರೋಗ್ಯಾಧಿಕಾರಿ ಸತೀಶ್​

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು ಎಂದು ಆರೋಗ್ಯಾಧಿಕಾರಿ ಸತೀಶ್ ಮನವಿ ಮಾಡಿದ್ದಾರೆ.

Health Minister  sathish
ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್
author img

By

Published : Nov 2, 2020, 3:30 PM IST

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 87 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 25,120ಕ್ಕೆ ಏರಿಕೆಯಾಗಿದೆ. 1 ಸಾವಿನೊಂದಿಗೆ ಮೃತರ ಸಂಖ್ಯೆ 429 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಇಂದು ಬಿಡುಗಡೆಯಾದ 108 ಜನರು ಸೇರಿ ಈವರೆಗೆ 23,666 ಮಂದಿ ಗುಣಮುಖರಾಗಿದ್ದಾರೆ. 1025 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 34 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್

ತಾಲೂಕುವಾರು ಪ್ರಕರಣ: ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-2, ಅರಕಲಗೂಡು-9, ಅರಸೀಕೆರೆ-7, ಬೇಲೂರು-8, ಚನ್ನರಾಯಪಟ್ಟಣ-3, ಹಾಸನ-39, ಹೊಳೆನರಸೀಪುರ-16, ಸಕಲೇಶಪುರ-3 ಸೇರಿ ಒಟ್ಟು 87 ಪ್ರಕರಣ ಪತ್ತೆಯಾಗಿವೆ.

press release
ಮಾಧ್ಯಮ ಪ್ರಕಟಣೆ
ಆರೋಗ್ಯಾಧಿಕಾರಿ ಮನವಿ: ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.