ETV Bharat / state

ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ: ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳ

ಮಲೆನಾಡಿನಲ್ಲಿ ಮತ್ತೆ ಮಳೆರಾಯನ ಅಬ್ಬರ ಜೋರಾಗಿದ್ದು, ಗುರುವಾರದಿಂದ ಆರಂಭಗೊಂಡಿರುವ ಮಳೆ ಇಂದು ಕೂಡ ಮುಂದುವರೆದಿದೆ. ಹೇಮಾವತಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಿದ ಹಿನ್ನೆಲೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.

ಮನೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ..ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ
author img

By

Published : Sep 7, 2019, 4:19 PM IST

ಹಾಸನ: ಮಲೆನಾಡಿನಲ್ಲಿ ಮತ್ತೆ ಮಳೆರಾಯನ ಅಬ್ಬರ ಜೋರಾಗಿದ್ದು, ಗುರುವಾರದಿಂದ ಆರಂಭಗೊಂಡಿರುವ ಮಳೆ ಇಂದು ಕೂಡ ಮುಂದುವರೆದಿದೆ. ಹೇಮಾವತಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಿದ ಹಿನ್ನೆಲೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.

ಮನೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ: ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳ

ಹೇಮಾವತಿ ಜಲಾಶಯಕ್ಕೆ 24,232 ಕ್ಯೂಸೆಕ್​​ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 23,950 ಕ್ಯೂಸೆಕ್ ನೀರನ್ನ ಹೊರ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2922 ಅಡಿಯಾಗಿದ್ದು, ಪ್ರಸ್ತುತ ಜಲಾಶಯದಲ್ಲಿ 2921.62 ಅಡಿ ನೀರು ಸಂಗ್ರಹವಾಗಿದೆ. ಇನ್ನು, ಸಕಲೇಶಪುರ-ಆಲೂರು ಹಾಗೂ ಬೇಲೂರು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಮೂರು ದಿನಗಳಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೇಮಾವತಿ ಜಲಾನಯನ ಪ್ರದೇಶವಾದ ಮೂಡಿಗೆರೆ ಭಾಗದಲ್ಲಿ ವರುಣನ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲಲ್ಲಿ ಗುಡ್ಡ ಕುಸಿತ ಪ್ರಕರಣ ಪುನರಾವರ್ತಿತವಾಗುತ್ತಿದ್ದು, ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ 72 ಗಂಟೆಗಳಲ್ಲಿ ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Intro:ಹಾಸನ : ಮಲೆನಾಡಿನಲ್ಲಿ ಮತ್ತೆ ಮಳೆಯ ಅಬ್ಬರ ಪುನರಾರಂಭಗೊಂಡಿದ್ದು ಗುರುವಾರದಿಂದ ಆರಂಭಗೊಂಡಿರುವ ಮಳೆ ಇಂದು ಸಹ ಮುಂದುವರೆದಿದೆ. ಹೇಮಾವತಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಿನ ಹಿನ್ನೆಲೆಯಲ್ಲಿ ಹೇಗೆ ಒಳಹರಿವು ಪ್ರಮಾಣದಲ್ಲಿ ಏರಿಕೆ ಕಂಡಿದೆ.

Body:ಇಂದು ಹೇಮಾವತಿ ಜಲಾಶಯಕ್ಕೆ 24232 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ಜಲಾಶಯದಿಂದ 23950 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2922 ಅಡಿಗಳಿಗೂ ಪ್ರಸ್ತುತ ಜಲಾಶಯದಲ್ಲಿ2921.62 ಅಡಿ ನೀರು ಸಂಗ್ರಹವಾಗಿದೆ.

ಇನ್ನು ಸಕಲೇಶಪುರ-ಆಲೂರು ಬೇಲೂರು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು ಮೂರುದಿನಗಳಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಹೇಮಾವತಿ ಜಲನಯನ ಪ್ರದೇಶವಾದ ಮೂಡಿಗೆರೆ ಭಾಗದಲ್ಲಿ ವರುಣನ ಅಬ್ಬರಕ್ಕೆ ಆ ಭಾಗದ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲಲ್ಲಿ ಗುಡ್ಡ ಕುಸಿತ ಪ್ರಕರಣ ಪುನರಾವರ್ತಿತವಾಗುತ್ತಿದ್ದು, ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ 72 ಗಂಟೆಗಳಲ್ಲಿ ಹಾಸನ ಚಿಕ್ಕಮಗಳೂರು ಕೊಡಗು ಸೇರಿದಂತೆ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ ಸುರಿದ ಮಳೆಯಲ್ಲಿ ಕೊಚ್ಚಿಹೋಗಿ ಅಳಿದುಳಿದಿದ್ದ ಕಾಫಿ, ಮೆಣಸು ಬೆಳೆಗಾರರಿಗೆ ಈಗ ಸುರಿಯುತ್ತಿರುವ ಮಳೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಳಿದುಳಿದಿದ್ದ ಬೆಳೆಯನ್ನು ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಆಪೋಷನ ತೆಗೆದುಕೊಂಡಿದೆ.

Conclusion:ಇಂದು ಹಾಸನ ಅರಕಲಗೂಡು ಬೇಲೂರು ಆಲೂರು ಭಾಗದಲ್ಲಿ ಬೆಳೆದಿರುವ ಜೋಳ ಆಲೂಗೆಡ್ಡೆಗೆ ಸೀತ ಕಂಡುಬಂದಿದ್ದು ಇಳುವರಿ ಕುಂಠಿತವಾಗುವ ಹಾಗೂ ಕೊಳೆ ರೋಗಕ್ಕೆ ತುತ್ತಾಗುವ ಆತಂಕದಲ್ಲಿ ರೈತರು ಪರದಾಡುವಂತಾಗಿದೆ.

- ಅರಕೆರೆ‌ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.