ಹಾಸನ: ಅರಸೀಕೆರೆ ತಾಲ್ಲೂಕಿಗೆ ಸೇರಿದ ಜಾವಗಲ್ ಸಮೀಪದ ಅರಕೆರೆ ಗ್ರಾಮದಲ್ಲಿ ಮಳೆಯಿಂದಾಗಿ ರಸ್ತೆಗಳು ಕೆರೆಗಳಂತಾಗಿದ್ದು, ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದಿರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣ ಎಂದು ಗ್ರಾಮಸ್ಥರು ಹೇಳುತ್ತಾರೆ. ಚರಂಡಿ ವ್ಯವಸ್ಥೆ ಸರಿಮಾಡಿಸಿ ಎಂದು ಈ ಹಿಂದೆಯೇ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.
ಮೊದಲೇ ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಈಗ ಮಳೆಯ ಸಂಕಷ್ಟ ತಂದಿದೆ. ಚರಂಡಿ ಸರಿ ಮಾಡಿಸದ ಪಿಡಿಒ ವಿರುದ್ಧ ಗ್ರಾಮಸ್ಥರು ಎಂದಿನಂತೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.