ETV Bharat / state

ಭಾರಿ ಮಳೆ: ಹಾಸನ, ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ - Holiday to Hassan and Shimoga School Colleges

ಶಿವಮೊಗ್ಗ ಹಾಗೂ ಹಾಸನದಲ್ಲಿ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಳೆ
author img

By

Published : Aug 6, 2019, 9:10 AM IST

ಹಾಸನ / ಶಿವಮೊಗ್ಗ: ಎರಡು ಜಿಲ್ಲೆಯಲ್ಲೂ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಆಯಾ ಜಿಲ್ಲಾಡಳಿತ ಘೋಷಣೆ ಮಾಡಿದೆ.

ಶಿವಮೊಗ್ಗದಲ್ಲಿ ಬಿಡದೆ ಸುರಿಯುತ್ತಿರುವ ಮಳೆ

ಹಾಸನದಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿರುವ ಹಿನ್ನೆಲೆಯಲ್ಲಿ ಸಕಲೇಶಪುರ ತಾಲ್ಲೂಕು, ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿ, ಆಲೂರು ತಾಲೂಕಿನ ಹೊಸಕೋಟೆ ಕುಂದೂರು ಮತ್ತು ಪಾಳ್ಯ ಹೋಬಳಿ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲೂ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಎ ದಯಾನಂದ ಆದೇಶ ಹೊರಡಿಸಿದ್ದಾರೆ.

Intro:ಹಾಸನ : ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಡಳಿತ ಘೋಷಣೆ ಮಾಡಿದೆ.

Body:ಬಿ.ಇ.ಒ ಗಳ ಮನವಿ ಮೇರೆಗೆ ರಜೆ ಘೋಷಣೆಗೆ ಡಿ.ಡಿ.ಪಿ.ಐ ಅವರಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಅಧಿಕಾರ ನೀಡಿದ್ದಾರೆ. ಹಾಸನದಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಕಲೇಶಪುರ ತಾಲ್ಲೂಕು,ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿ, ಆಲೂರು ತಾಲೂಕಿನ ಹೊಸಕೋಟೆ ಕುಂದೂರು ಮತ್ತು ಪಾಳ್ಯ ಹೋಬಳಿಗಳಿಗೆ ರಜೆ ಘೋಷಣೆ ಮಾಡಿದೆ. ಹಾಗೆಯೇ ಕಳೆದೆರಡು ದಿನಗಳಿಂದ ಜಿಲ್ಲೆ ಹಲವೆಡೆ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಮುಂಜಾಗೃತಾ ದೃಷ್ಟಿಯಿಂದ ಇಂದು ರಜೆ ನೀಡಿ ಮೌಖಿಕ ಆದೇಶ ಘೋಷಿಸಿದೆ.

Conclusion:ಸಕಲೇಶಪುರ-ಆಲೂರು ಸುತ್ತಮುತ್ತ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.