ಹಾಸನ: ನಗರದ ಹೃದಯ ಭಾಗದಲ್ಲಿರುವ ಜನವಸತಿ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲೇ ಮನೆಕಳ್ಳತನ ಪ್ರಕರಣ ನಡೆದಿದೆ. ಘಟನೆಯಲ್ಲಿ 20 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿರುವ ಕಳ್ಳರು ಪರಾರಿಯಾಗಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಸ್ಲೇಟರ್ಸ್ ಮೆಮೋರಿಯಲ್ ಹಾಲ್ ಬಳಿಯಿರುವ ರಕ್ಷಣಾಪುರಂ ರಸ್ತೆ ಬಳಿ ಕ್ರಿಶ್ಚಿಯನ್ ಚರ್ಚ್ ಹಿಂಭಾಗ ವಾಸವಾಗಿರುವ ನಿರಂತರ ಎಂಬ ಹೆಸರಿನ ಮನೆಯಲ್ಲಿ ಕಳ್ಳತನ ನಡೆದಿದೆ. ಗುತ್ತಿಗೆದಾರ ನವೀನ್ ಕುಮಾರ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಕಳ್ಳರು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 1 ಲಕ್ಷ ರೂ ನಗದು ಸೇರಿದಂತೆ ಇತರೆ ವಸ್ತುಗಳನ್ನು ದೋಚಿದ್ದಾರೆ.