ETV Bharat / state

ಅರಕಲಗೂಡು: ಕೊರೊನಾ ವಾರಿಯರ್ಸ್ ಗೆ ಸನ್ಮಾನ - Honoured to corona warriors

ಕೊಣನೂರು ವೈಎಸ್ ಆರ್ ಕಲ್ಯಾಣ ಮಂಟಪದಲ್ಲಿ ಎ.ಮಂಜು ಅಭಿಮಾನಿ ಬಳಗದ ವತಿಯಿಂದ ಇಂದು ಕೊರೊನಾ ವಾರಿಯರ್ಸ್ ಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನೆನಪಿನ ಕಾಣಿಕೆಗಳನ್ನು ನೀಡಿ ಕೊರೊನಾ ವಾರಿಯರ್ಸ್‌ ಗಳನ್ನು ಗೌರವಿಸಲಾಯಿತು.

Honoured to corona warriors
Honoured to corona warriors
author img

By

Published : Jun 24, 2020, 11:16 PM IST

ಅರಕಲಗೂಡು: ದೇಶದ ಗಡಿ ಕಾಯುವ ಸೈನಿಕರಷ್ಟೇ ಶ್ರಮವಹಿಸಿ ಮಹಾಮಾರಿ ಕೊರೊನಾ ಸೋಂಕು ತಡೆಗೆ ಪ್ರಾಣ ಒತ್ತೆ ಇಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್ ಗಳ ಸೇವೆಗೆ ಬೆಲೆ ಕಟ್ಟಲು ಸಾಧ್ಯವಾಗದು ಎಂದು ಮಾಜಿ ಸಚಿವ ಎ. ಮಂಜು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿನ ಕೊಣನೂರು ವೈಎಸ್ ಆರ್ ಕಲ್ಯಾಣ ಮಂಟಪದಲ್ಲಿ ಎ.ಮಂಜು ಅಭಿಮಾನಿ ಬಳಗದ ವತಿಯಿಂದ ಇಂದು ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಎ.ಮಂಜು, ಜಗತ್ತಿನ ಎಲ್ಲೆಡೆ ಮಹಾಮಾರಿಯಾಗಿ ವ್ಯಾಪಿಸುತ್ತಿರುವ ಕೊರೊನಾ ಸೋಂಕು ಇಡೀ ಮನುಕುಲಕ್ಕೆ ಕಂಟಕವಾಗುತ್ತಿದೆ. ‌ಈ ನಡುವೆ ಜೀವದ ಹಂಗು ತೊರೆದು ಜನರಿಗೆ ತಿಳುವಳಿಕೆ ನೀಡಿ ಸೋಂಕು ಹರಡದಂತೆ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಗಳ ಸೇವೆ ಅನನ್ಯವಾದದ್ದು ಎಂದು ಶ್ಲಾಘಿಸಿದರು.

ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. ಸಾರ್ವಜನಿಕರು ಸದಾ ಎಚ್ಚೆತ್ತು ಸ್ವಯಂಪ್ರೇರಿತರಾಗಿ ಪರಸ್ಪರ ದೈಹಿಕ ಅಂತರ ಕಾಪಾಡಿಕೊಂಡು ಸುರಕ್ಷತಾ ಕ್ರಮಗಳನ್ನು ಪಾಲಿಸಿ ಜನ ಸಮುದಾಯಕ್ಕೆ ಸೋಂಕು ಹರಡದಂತೆ ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು.

ನಾಳೆಯಿಂದ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವ ಮಕ್ಕಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಧೈರ್ಯ ತುಂಬುವ ಮೂಲಕ ಉತ್ತಮ ಫಲಿತಾಂಶ ಬರಲು ಸಹಕರಿಸಬೇಕಿದೆ. ಯಾರೊಬ್ಬರೂ ಕೂಡಾ ಸರ್ಕಾರದ ಸಲಹೆಗಳನ್ನು ತಿರಸ್ಕರಿಸಬಾರದು ಎಂದು ಮನವಿ‌ ಮಾಡಿದರು.

ಸಮಾರಂಭದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ನರ್ಸ್ ಗಳು, ನೂರಾರು ಅಂಗನವಾಡಿ ಕಾರ್ಯಕರ್ತರಿಗೆ, ಆಶಾ ಕಾರ್ಯಕರ್ತರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.