ETV Bharat / state

ಕೋರ್ಟ್​ ಆವರಣದಲ್ಲೇ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದ ಪತಿ.. ಹಾಸನದಲ್ಲಿ ಹರಿದ ನೆತ್ತರು - ಕೋರ್ಟ್​ ಆವರಣದಲ್ಲೇ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದ ಪತಿ

ನ್ಯಾಯಾಲಯದ ಆವರಣದಲ್ಲೇ ಪತಿಯು ತನ್ನ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಭಯಾನಕ ಘಟನೆ ಹೊಳೆನರಸೀಪುರದಲ್ಲಿ ನಡೆದಿದೆ.

Etv Bharathusband-killed-his-wife-in-hasan
Etv Bharatಹಾಸನ: ಕೋರ್ಟ್​ ಆವರಣದಲ್ಲೇ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದ ಪತಿ
author img

By

Published : Aug 13, 2022, 4:08 PM IST

Updated : Aug 13, 2022, 5:29 PM IST

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲೇ ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಭಯಾನಕ ಘಟನೆ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಪತಿ ಶಿವಕುಮಾರ್ ಎಂಬಾತ ಪತ್ನಿ ಚೈತ್ರಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮಹಿಳೆ ಮೃತಪಟ್ಟಿದ್ದಾರೆ.

5 ವರ್ಷದ ಹಿಂದೆ ತಟ್ಟೇಕೆರೆ ಗ್ರಾಮದ ಶಿವಕುಮಾರ್ ಹಾಗೂ ಚೈತ್ರಾ ಅವರ ಮದುವೆಯಾಗಿತ್ತು. ಆದರೆ ಸಂಸಾರದಲ್ಲಿ ವಿರಸ ಉಂಟಾಗಿ ಎರಡು ವರ್ಷಗಳ ಹಿಂದೆಯೇ ಇಬ್ಬರೂ ಬೇರೆ ಬೇರೆಯಾಗಿದ್ದರು. ಹೀಗಾಗಿ ಚೈತ್ರಾ 2 ವರ್ಷದ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಜೀವನಾಂಶ ಕೇಳಿದ್ದರು. ಈ ಸಂಬಂಧ ಇಂದು ವಿಚಾರಣೆಗೆಂದು ನ್ಯಾಯಾಲಯಕ್ಕೆ ದಂಪತಿ ಆಗಮಿಸಿದ್ದರು.

ಕೋರ್ಟ್​ ಆವರಣದಲ್ಲೇ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದ ಪತಿ

ಆದರೆ, ನ್ಯಾಯಾಲಯದ ಆವರಣಕ್ಕೆ ಪತ್ನಿ ಬರುತ್ತಿದ್ದಂತೆ ಏಕಾಏಕಿ ಶಿವಕುಮಾರ್ ತಾನು ತಂದಿದ್ದ ಚಾಕುವಿನಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕತ್ತನ್ನು ಕೊಯ್ದು ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಸಾರ್ವಜನಿಕರು ಆತನನ್ನು ಹಿಡಿಯಲು ಸಾಕಷ್ಟು ಪ್ರಯತ್ನಪಟ್ಟರೂ ಚಾಕು ತೋರಿಸಿ ಓಡಿಹೋಗಲು ಪ್ರಯತ್ನಿಸಿದ್ದ. ಆದರೆ ಬೆಂಬಿಡದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಹಲ್ಲೆಗೊಳಗಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಚೈತ್ರಾರನ್ನು ತಕ್ಷಣ ತುರ್ತು ವಾಹನದ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಂದನವನದ ಉದಯೋನ್ಮುಖ ನಟನಿಂದ ಹನಿಟ್ರ್ಯಾಪ್​.. ಆರೋಪಿ ಬಂಧಿಸಿದ ಪೊಲೀಸರು

Last Updated : Aug 13, 2022, 5:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.