ಅನೈತಿಕ ಸಂಬಂಧ ಶಂಕೆ: ಪತಿಯಿಂದ ಪತ್ನಿಯ ಕೊಲೆ - ಅನೈತಿಕ ಸಂಬಂಧ ಶಂಕೆ ಕೊಲೆ
ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಗಂಡನೇ ಹೆಂಡತಿಯನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹಳೇಬೀಡಿನಲ್ಲಿ ನಡೆದಿದೆ.

ಪತ್ನಿಯನ್ನೆ ಕೊಲೆ ಮಾಡಿದ ಪಾಪಿ ಗಂಡ
ಹಾಸನ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಗಂಡನೇ ಹೆಂಡತಿಯನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹಳೇಬೀಡಿನಲ್ಲಿ ನಡೆದಿದೆ.
ತಾರಾ (26) ಕೊಲೆಯಾದವರು ಎಂದು ತಿಳಿದು ಬಂದಿದೆ. ನವೀನ್ ಎಂಬಾತ ಒಂಭತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಇವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಕಳೆದ ಒಂದೂವರೆ ವರ್ಷದಿಂದ ಹೆಂಡತಿ ಮೇಲೆ ಸಂಶಯಪಟ್ಟು ಸಾಕಷ್ಟು ಬಾರಿ ಜಗಳ ಮಾಡಿದ್ದನಂತೆ. ಹಲವು ಬಾರಿ ಬುದ್ಧಿಮಾತು ಹೇಳಿದರೂ ಅನೈತಿಕ ಸಂಬಂಧ ಹೊಂದಿದ್ದಾಳೆಂದು ತಿಳಿದು ಗಂಡ ಆಕೆಯನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾನೆ.
ಹಳೇಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.