ETV Bharat / state

ಈ ಬಾರಿಯ ಬಜೆಟ್ ಮೇಲೆ ನಂಬಿಕೆ ಇಲ್ಲ: ಶಾಸಕ ಶಿವಲಿಂಗೇಗೌಡ - MLA Shivalinga Gowda reation

ನನಗೆ ಈ ಬಾರಿಯ ಬಜೆಟ್ ಮೇಲೆ ನಂಬಿಕೆ ಇಲ್ಲ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

MLA Shivalinga Gowda
ಅರಸೀಕೆರೆ ಶಾಸಕ ಕೆ.ಎಂ ಶಿವಲಿಂಗೇಗೌಡ
author img

By

Published : Feb 1, 2021, 9:16 AM IST

ಹಾಸನ: ದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ ಮೋದಿಯವರು ಉದ್ಯೋಗ ಕಡಿತ ಮಾಡಲು ಕಾರಣಕರ್ತರಾಗಿದ್ದಾರೆ. ಹೀಗಾಗಿ ಬಜೆಟ್ ಮೇಲೆ ನಂಬಿಕೆ ಇಲ್ಲ ಎಂದು ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದ್ದಾರೆ.

ನಗರದಲ್ಲಿ ಬಜೆಟ್ ಮಂಡನೆ​ ಬಗ್ಗೆ ಪ್ರತಿಕ್ರಿಯಿಸಿದ ಅವರು, ರೈಲ್ವೆ ಮೇಲ್ಸೇತುವೆ ಸೇರಿದಂತೆ ಸಾಕಷ್ಟು ಯೋಜನೆಗಳಿಗೆ ಕೇಂದ್ರ ಸರ್ಕಾರ ಜಿಲ್ಲೆಗೆ ಅನುದಾನ ನೀಡಿಲ್ಲ. ಹೀಗಾಗಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಆರ್ಥಿಕತೆಗೆ ಬಿದ್ದ ಹೊಡೆತದ ನಡುವೆಯೂ, ರಾಜ್ಯದ ಜನರಿಗೆ ಬಜೆಟ್​ನಲ್ಲಿ ಉತ್ತಮ ಕೊಡುಗೆ ನಿರೀಕ್ಷೆ

ಬೇಲೂರು ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ಬೇಲೂರು ಮತ್ತು ಹಳೇಬೀಡು ಐತಿಹಾಸಿಕ ಸ್ಥಳಗಳನ್ನು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬಜೆಟ್​​ನಲ್ಲಿ ಹೊಸ ಯೋಜನೆ ರೂಪಿಸಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.