ETV Bharat / state

ನಾನು ಯಾರ ಮನೆ ಬಾಗಿಲಿಗೂ ಹೋಗಿಲ್ಲ: ಹೆಚ್​.ಡಿ. ರೇವಣ್ಣ

ನಾನು ಸಂತೋಷ್ ಅವರ ಮನೆ ಬಾಗಿಲಿಗಾಗಲಿ, ಪ್ರಹ್ಲಾದ್ ಜೋಶಿ ಅವರ ಮನೆಗಾಗಲಿ ಹೋಗಿಲ್ಲ. ನನಗೆ ಅದರ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

h-d-revanna
ಹೆಚ್​ ಡಿ ರೇವಣ್ಣ
author img

By

Published : Jul 29, 2021, 10:59 PM IST

ಹಾಸನ: ಜನತಾ ಪರಿವಾರದಿಂದ ಬಂದವರೇ ಹೆಚ್ಚಿನ ಜನ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿರೋದು. ಹಿಂದಿನ‌ ಎರಡು ವರ್ಷದ ಸರ್ಕಾರದಲ್ಲಿ ಸುಲಿಗೆ ನಡೆಯುತ್ತಿತ್ತು. ಅದರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ನೂತನ ಮುಖ್ಯಮಂತ್ರಿ ಹೇಳಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಹೆಚ್. ಡಿ ರೇವಣ್ಣ

ಜಿಲ್ಲೆಯ ಚನ್ನರಾಯಪಟ್ಟಣದ ಉದಯಪುರದಲ್ಲಿ ಕೃಷಿ ಯಂತ್ರಧಾರೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವ ಮುಖಂಡ ಮುಖ್ಯಮಂತ್ರಿ ಆಗಿರೋದು ಸಂತೋಷದ ವಿಚಾರ. ಅವರು ಭ್ರಷ್ಟಾಚಾರ ತಡೆಯುವುದೇ ನಮ್ಮ‌ ಗುರಿ ಅಂದಿದ್ದಾರೆ. ಒಳ್ಳೆ ಕೆಲಸ ಮಾಡಿ ಜನರ ವಿಶ್ವಾಸ ಗಳಿಸಲಿ. ಹಾಸನ ಜಿಲ್ಲೆಯಲ್ಲಿನ ಕೆಲಸ ತಡೆ ಹಿಡಿದಿದ್ದಾಗಿ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ. ಈಗ ಹೊಸ ಮುಖ್ಯಮಂತ್ರಿ ಬಂದಿದ್ದಾರೆ. ಅವರು ರೈತಪರ, ಒಳ್ಳೆಯ ಕೆಲಸ ಮಾಡಲಿ. ಆ ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದರು.

ನಾನು ಸಂತೋಷ್ ಅವರ ಮನೆ ಬಾಗಿಲಿಗಾಗಲಿ, ಪ್ರಹ್ಲಾದ್ ಜೋಶಿ ಅವರ ಮನೆಗಾಗಲಿ ಹೋಗಿಲ್ಲ. ನನಗೆ ಅದರ ಅವಶ್ಯಕತೆ ಇಲ್ಲ. ಹಿಂದೆ ಗಡ್ಕರಿ ಅವರೇ ಬಂದು ಕೆಲವು ಯೋಜನೆಗಳಿಗೆ ಅಡಿಗಲ್ಲು ಹಾಕಿದ್ರು. ಹೀಗಾಗಿ ಆ ಬಗ್ಗೆ ಮಾತಾಡಲು ದೆಹಲಿಗೆ ಹೋಗಿದ್ದೆ. ನಾನು ಯಾವುದೇ ರಾಜಕೀಯ ಕಾರಣಕ್ಕೆ ದೆಹಲಿಗೆ ಹೋಗಿರಲಿಲ್ಲ ಎಂದು ತಿಳಿಸಿದರು.

ಓದಿ: ಶಾಸಕನಾಗಿಯೇ ಅಭಿವೃದ್ಧಿ ಮಾಡಿ ತೋರಿಸುತ್ತೇನೆ : ಶೆಟ್ಟರ್ ಸವಾಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.