ETV Bharat / state

ಕೊರೊನಾ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ: ಹಾಸನ ಡಿಸಿ - corona symptoms are found Get tested DC suggestion News

ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರು ತಪ್ಪದೇ ಕೊರೊನಾ ಪರೀಕ್ಷೆಗೆ ಒಳಗಾಗಬೇಕು. ಕೋವಿಡ್ ಪರೀಕ್ಷೆ ಮಾಡಿದಾಗ ತಕ್ಷಣ ಅಥವಾ ಒಂದು ದಿನದ ಒಳಗೆ ವರದಿ ಬರುತ್ತದೆ. ಆದ್ದರಿಂದ ಸಾರ್ವಜನಿಕರು ಸಹರಿಸಬೇಕೆಂದು ಹೇಳಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್
ಜಿಲ್ಲಾಧಿಕಾರಿ ಆರ್. ಗಿರೀಶ್
author img

By

Published : Aug 28, 2020, 8:11 AM IST

ಹಾಸನ: ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಕೋವಿಡ್ ಬಹಳ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಒಟ್ಟಾಗಿ ಕೊರೊನಾ ವೈರಸ್ ವಿರುದ್ಧ ಹೋರಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಕರೆ ನೀಡಿದ್ದಾರೆ.

ಸಾರ್ವಜನಿಕರು ಯಾವುದೇ ವಿಳಂಬ ಮಾಡದೆ ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಕೊರೊನಾ ಲಕ್ಷಣಗಳು ಕಂಡು ಬಾರದಿದ್ದರೂ ಜನ ಸಾವಿಗೆ ತುತ್ತಾಗುತ್ತಿದ್ದಾರೆ. ಆಮ್ಲಜನಕ ನಿಗದಿತ ಪ್ರಮಾಣಕ್ಕಿಂತಲೂ ಕಡಿಮೆಯಾದರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್

ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರು ತಪ್ಪದೇ ಕೊರೊನಾ ಪರೀಕ್ಷೆಗೆ ಒಳಗಾಗಬೇಕು. ಕೋವಿಡ್ ಪರೀಕ್ಷೆ ಮಾಡಿದಾಗ ತಕ್ಷಣ ಅಥವಾ ಒಂದು ದಿನದ ಒಳಗೆ ವರದಿ ಬರುತ್ತದೆ. ಆದ್ದರಿಂದ ಸಾರ್ವಜನಿಕರು ಸಹರಿಸಬೇಕೆಂದು ಹೇಳಿದರು.

ಕೋವಿಡ್ ಪರೀಕ್ಷೆಗೊಳಗಾದವರಲ್ಲಿ ಸೋಂಕು ದೃಢಪಟ್ಟಂತಹ ವ್ಯಕ್ತಿಗಳಲ್ಲಿ ಯಾವುದೇ ರೀತಿಯ ಕೊರೊನಾ ಲಕ್ಷಣಗಳು ಕಾಣದಿದ್ದರೆ ಅಂತಹವರಿಗೆ ಮನೆಯಲ್ಲಿಯೇ ಕ್ವಾರಂಟೈನ್ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು. ರೋಗ ಲಕ್ಷಣಗಳು ಇದ್ದರೂ ಅಥವಾ ಇಲ್ಲದಿದ್ದರೂ ಪರೀಕ್ಷೆಗೆ ಒಳಗಾಗುವುದರಿಂದ ಸೋಂಕು ಇರುವುದು ದೃಢಪಟ್ಟರೆ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ನೀಡಬಹುದು. ಕೊರೊನಾ ಪರೀಕ್ಷೆಗೆ ತಾಲೂಕು ಆರೋಗ್ಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಕೋವಿಡ್-19 ಪರೀಕ್ಷೆಗಳು ಹಾಗೂ ಸಲಹೆಗಳಿಗಾಗಿ ಸಹಾಯವಾಣಿ ತೆರೆಯಲಾಗಿದ್ದು, ಸಾರ್ವಜನಿಕರು 08172-246575 ಸಂಖ್ಯೆಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಕೋರಿದ್ದಾರೆ. ಪ್ರತಿಯೊಬ್ಬ ಸಾರ್ವಜನಿಕರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಕೋವಿಡ್ ಸಂಪೂರ್ಣ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.