ETV Bharat / state

ಹಾಸನದಲ್ಲಿ ಸ್ವಾತಂತ್ರ್ಯ ದಿನ: ಸಂಸದ ಪ್ರಜ್ವಲ್​​ ರೇವಣ್ಣ ಗೈರು... - ಜಿಲ್ಲಾಧಿಕಾರಿ ಅಕ್ರಂಪಾಷ

ದೇಶವನ್ನು ಬ್ರಿಟಿಷರ ಗುಲಾಮಗಿರಿಯ ಸಂಕೋಲೆಯಿಂದ ಬಂಧಮುಕ್ತಗೊಳಿಸಿ ಭಾರತೀಯರೆಲ್ಲ ಸ್ವತಂತ್ರರಾದ ದಿನದ ಸವಿನೆನಪಿಗಾಗಿ ಆಚರಿಸುವ ಸ್ವಾತಂತ್ರ್ಯ ದಿನಾಚರಣೆಯನ್ನು ಬುಧವಾರ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

independence day: MP prajwal revanna absent
author img

By

Published : Aug 15, 2019, 2:29 PM IST

ಹಾಸನ: ಸ್ವಾತಂತ್ರ್ಯ ದಿನವನ್ನ ಬುಧವಾರ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಧ್ವಜಾರೋಹಣ ನೆರವೇರಿಸಿದರು. ಆದರೆ, ಹಾಸನದ ಸಂಸದ ಪ್ರಜ್ವಲ್​​ ರೇವಣ್ಣ ಅವರು ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಹಾಸನದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ

ಸ್ಕೌಟ್ಸ್ & ಗೈಡ್ಸ್, ಎನ್‌ಸಿಸಿ, ಸೇವಾದಳ, ಪೊಲೀಸ್ ದೃಷ್ಟಿ ವಿಕಲಚೇತರನ್ನು ಒಳಗೊಂಡ 40 ತಂಡಗಳಿಂದ ಜಿಲ್ಲಾಧಿಕಾರಿ ಗೌರವ ವಂದನೆ ಸ್ವೀಕರಿಸಿದರು. ವಿವಿಧ ಶಾಲಾ ಮಕ್ಕಳು ದೇಶಾಭಿಮಾನ ಸಾರುವ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶಾಸಕ ಪ್ರೀತಂಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸ್ವರೂಪ್ ಇದರು.

Intro:ಹಾಸನ : ಜಿಲ್ಲೆಯಾದ್ಯಂತ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಂತಿಯುತವಾಗಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷ ಅವರು ಧ್ವಜಾರೋಹಣ ಮಾಡುವ ಮೂಲಕ ರಾಷ್ಟ್ರ ಧ್ವಜಕ್ಕೆ ವಂದನೆ ಸಲ್ಲಿಸಿದರು.

Body:ಬಳಿಕ ಸ್ಕೌಟ್ಸ್-ಗೈಡ್ಸ್, ಎನ್‌ಸಿಸಿ, ಸೇವಾದಳ, ಪೊಲೀಸ್ ದೃಷ್ಟಿ ವಿಕಲಚೇತರ ನ್ನೊಳಗೊಂಡ 40 ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.
ನಗರದ ವಿವಿಧ ಶಾಲಾ ಮಕ್ಕಳು ಸ್ವತಂತ್ರ ಸಂದೇಶ ಸಾರುವ ಅಭಿನಯ ನೃತ್ಯವನ್ನು ಮಾಡಿದ್ದರು. ಆಕರ್ಷಕ ಪಥಸಂಚಲನ ಶಿಸ್ತುಬದ್ಧ ಕಾರ್ಯಕ್ರಮ ಮೂಡಿಬಂದಿತು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಾನಾ ಇಲಾಖೆಗಳಿಂದ ಸಿದ್ಧಪಡಿಸಲಾಗಿದ್ದ ಚಿತ್ರಗಳು ನೋಡುಗರ ಗಮನಸೆಳೆಯಿತು. ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಪ್ರಶಸ್ತಿಗೆ ಆಯ್ಕೆಯಾದವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಶಾಸಕ ಪ್ರೀತಂ ಗೌಡ, ಎಂಎಲ್‌ದಿ ಗೋಪಾಲಸ್ವಾಮಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸ್ವರೂಪ್ ಮತ್ತಿತರರು ಹಾಜರಿದ್ದರಲ್ಲದೇ ಸಂಸದ ಪ್ರಜ್ವಲ್ ರೇವಣ್ಣ ಗೈರಾಗಿದ್ದರು.

ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳು, ಖಾಸಗಿ ಸಂಸ್ಥೆಗಳು, ಆಟೋ ಹಾಗೂ ಕಾರು ಚಾಲಕರು ಸೇರಿದಂತೆ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಎಲ್ಲೆಡೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು.

Conclusion:ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾಧಿಕಾರಿ ಅಕ್ರಂಪಾಷ ಧ್ವಜಾರೋಹಣ ನೆರವೇರಿಸಿದರು. ಸೇವಾದಳ, ಸ್ವಾತಂತ್ರಹೋರಾಟಗಾರರು, ಪತ್ರಕರ್ತರು ಭಾಗವಹಿಸಿ ವಂದನೆ ಸಲ್ಲಿಸಿದರು. ಪೊಲೀಸ್ ವರಿಷ್ಠಾಧಿಕಾರಿ ಡಾ
ಎ. ಎನ್. ಪ್ರಕಾಶ್ ಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತ ದೇವರಾಜ್ ಮತ್ತಿತರರು ಹಾಜರಿದ್ದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.