ಹಾಸನ/ಹೊಳೆನರಸೀಪುರ: ಯುವಕನೋರ್ವ ದ್ವಿಚಕ್ರ ವಾಹನದಲ್ಲಿ 25 ಲಕ್ಷ ರೂ. ಅಕ್ರಮ ಹಣ ಸಾಗಿಸುತ್ತಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಹೊಳೆನರಸೀಪುರದಲ್ಲಿ ನಡೆದಿದೆ.
ಐಟಿ ಅಧಿಕಾರಿಗಳು ಯುವಕನಿಂದ ನಗದು ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಹಳ್ಳಿಮೈಸೂರು ಕಡೆಯಿಂದ ಹೊಳೇನರಸೀಪುರ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ.
ನಂತರ ಗ್ರಾಮಾಂತರ ಪೊಲೀಸ್ ಠಾಣೆಯ ಕಚೇರಿಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದ್ದಾರೆ.