ETV Bharat / state

ಹಾನಿಗೊಳಗಾದ ಕೆರೆಗಳ ತಾತ್ಕಾಲಿಕ ದುರಸ್ತಿಗೆ ಕ್ರಮ ವಹಿಸಿ: ಸಚಿವ ಮಾಧುಸ್ವಾಮಿ ಸೂಚನೆ - Progress review meeting on revival of small irrigation lakes in Hassan

ಮಳೆಯಿಂದ ಹಾನಿಯಾಗಿರುವ ಕೆರೆಗಳನ್ನು ದುರಸ್ತಿಪಡಿಸುವಲ್ಲಿ ಕ್ರಮ ವಹಿಸಿ ಕೆರೆಗಳ ಯಥಾಸ್ಥಿತಿಯನ್ನು ಕಾಪಾಡುವಂತೆ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

JC Madhuswamy
ಸಚಿವ ಜೆ.ಸಿ.ಮಾಧುಸ್ವಾಮಿ
author img

By

Published : Nov 14, 2020, 8:05 PM IST

ಹಾಸನ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಎಲ್ಲಾ ಕೆರೆಗಳನ್ನು ತಾತ್ಕಾಲಿಕವಾಗಿ ದುರಸ್ತಿಪಡಿಸಲು ಕ್ರಮ ವಹಿಸುವಂತೆ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಣ್ಣ ನೀರಾವರಿ ಕೆರೆಗಳ ಪುನರುಜ್ಜೀವನದ ಪ್ರಗತಿ ಪರಿಶೀಲನಾ ಸಭೆ

ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಮಳೆಯಿಂದಾಗಿರುವ ಸಣ್ಣ ನೀರಾವರಿ ಕೆರೆಗಳ ಪುನರುಜ್ಜೀವನ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಮಳೆಯಿಂದ ಹಾನಿಯಾಗಿರುವ ಕೆರೆಗಳನ್ನು ದುರಸ್ತಿಪಡಿಸುವಲ್ಲಿ ಬಾಕಿ ಉಳಿದಿರುವ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ ಕೆರೆಗಳ ಯಥಾಸ್ಥಿತಿ ಕಾಪಾಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಕೆರೆಯನ್ನು ಆಯ್ಕೆ ಮಾಡಿ ಪ್ರೇಕ್ಷಣೀಯ ಹಾಗೂ ಪ್ರವಾಸಿ ತಾಣದಂತೆ ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಎ.ಟಿ.ರಾಮಸ್ವಾಮಿ, ಹೆಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್ ಮಾತನಾಡಿ, ಕೆರೆಗಳ ಏರಿ ಮತ್ತು ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ ಜಾಲಿ ಮರಗಳು ಹೆಚ್ಚಾಗಿದ್ದು, ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಆದೇಶಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಕೆರೆಗಳ ಏರಿ ಮತ್ತು ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ ಜಾಲಿ ಮರಗಳನ್ನು ತೆರವುಗೊಳಿಸಲು ಹಾಗೂ ಕೆರೆಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‌ಗೌಡ, ಜಿಪಂ ಸಿಇಒ ಪರಮೇಶ್, ಸರ್ಕಾರದ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಸೂಪರಿಂಟೆಂಡೆಂಟ್​ ಇಂಜಿನಿಯರ್ ರಾಜ‌ಶೇಖರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.