ETV Bharat / state

ಗೂಂಡಾಗಳಂತೆ ವರ್ತಿಸುತ್ತಿರುವ ಅಧಿಕಾರಿಗಳ ಅಮಾನತಿಗೆ ಆಗ್ರಹ: ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

ಸಹಾಯಕ ಉಪನಿಬಂಧಕ ಸುನಿಲ್ ಹಾಗೂ ಉಪನಿಬಂಧಕ ನಾರಾಯಣ್ ಅರವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

JDS Activists Held Protest in Hassan
ಅಧಿಕಾರಿಗಳ ಅಮಾನತಿಗೆ ಆಗ್ರಹ: ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ
author img

By

Published : Mar 13, 2021, 12:56 PM IST

ಹಾಸನ: ತಾಲೂಕಿನ ಶಂಕ ಹಾಲಿನ ಡೈರಿ ವಿಚಾರದಲ್ಲಿ ಕರ್ತವ್ಯಲೋಪ ಹಾಗೂ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಸಹಾಯಕ ಉಪ ನಿಬಂಧಕ ಸುನಿಲ್ ಹಾಗೂ ಉಪನಿಬಂಧಕ ನಾರಾಯಣ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಧಿಕಾರಿಗಳ ಅಮಾನತಿಗೆ ಆಗ್ರಹ: ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಸರ್ಕಾರಿ ಅಧಿಕಾರಿಗಳಾದ ನಾರಾಯಣ ಮತ್ತು ಸುನಿಲ್ ವಿರುದ್ಧ ಘೋಷಣೆ ಕೂಗುತ್ತಾ ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಸಕಲೇಶಪುರ ತಾಲೂಕಿನ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುನೀಲ್ 3 ದಿನಗಳ ಹಿಂದೆ ತೆಲುಗು ಬಿಜೆಪಿಯ ಗೂಂಡಾಗಳನ್ನು ಕರೆದುಕೊಂಡು ಹೋಗಿ ಡೈರಿ ವಿಚಾರದಲ್ಲಿ ಗಲಾಟೆ ಮಾಡಿಸಿದ್ದು, ನಂತರ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಹಲ್ಲೆ ಮಾಡಿಸಿರುತ್ತಾರೆ. ಇಷ್ಟೇ ಅಲ್ಲದೆ ಹಾಸನದ ಜಿಲ್ಲಾ ಉಪನಿಬಂಧಕ ನಾರಾಯಣ್ ಮದ್ಯಪಾನ ಸೇವಿಸಿ ಜನಪ್ರತಿನಿಧಿಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಷ್ಟೇ ಅಲ್ಲದೆ, ಬಂದೂಕಿನಿಂದ ಕೊಲೆ ಬೆದರಿಕೆ ಕೂಡ ಹಾಕಿದ್ರು.

ಇವರ ವಿರುದ್ಧ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ, ಹಾಗೂ ಶಾಸಕ ಕೆ.ಎಂ ಶಿವಲಿಂಗೇಗೌಡ ಸದನದ ಅಂಗಳದಲ್ಲಿ ಈತನ ವಿರುದ್ಧ ಹಕ್ಕುಚ್ಯುತಿ ಮಂಡಿಸಬೇಕು ಎಂದು ಸಭಾಧ್ಯಕ್ಷರಿಗೆ ಆಗ್ರಹಿಸಿದ್ದರು. ಇದಕ್ಕೆ ಸಹಕಾರ ಸಚಿವ ಎಸ್​.ಟಿ. ಸೋಮಶೇಖರ್ ಆತನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

ಇದರ ಬೆನ್ನಲ್ಲೇ ಇಂದು ಜೆಡಿಎಸ್ ಕಾರ್ಯಕರ್ತರು ಇವರಿಬ್ಬರನ್ನು ಸೇವೆಯಿಂದ ವಜಾಗೊಳಿಸಬೇಕು. ಈ ಪ್ರಕರಣದ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿ ನೂರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.