ಹಾಸನ: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಾಗಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ಕಡಲೆಕಾಯಿ ತಿನ್ನುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಅಚ್ಚೇದಿನ್ ಬರುತ್ತದೆ ಅಂತ ಹೇಳಿದ್ರು. ಆದರೆ ರೈತರ ಬದುಕು ಪ್ರತಿನಿತ್ಯ ದುಸ್ತರವಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚು ತೆರಿಗೆ ಹಾಕಿರುವುದರಿಂದ ಜನಸಾಮಾನ್ಯರಿಗೆ ಹೊರೆ ಬೀಳುತ್ತಿದೆ. ಈ ನಿಟ್ಟಿನಲ್ಲಿ ಸಾರಿಗೆ ಮತ್ತು ಸರಕು ವೆಚ್ಚಗಳನ್ನು ಹಾಗೂ ಪೆಟ್ರೋಲಿಯಂ ದರಗಳನ್ನು ಇಳಿಕೆ ಮಾಡಿದರೆ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದರು.
ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸಲು ಮತ್ತು ಕೋವಿಡ್-19 ನಿರ್ವಹಣೆ ಮಾಡುವುದರಲ್ಲಿ ವಿಫಲವಾಗಿವೆ. ಕೋವಿಡ್-19 ಹೆಸರಲ್ಲಿ ಸರ್ಕಾರ ಲೂಟಿ ಮಾಡುತ್ತಿದೆ. ಸರ್ಕಾರಗಳು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಶೇಕಡಾ 50ಕ್ಕೂ ಅಧಿಕ ತೆರಿಗೆ ವಸೂಲಿ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒದಿ:CC Center ನಲ್ಲಿ ಸೋಂಕಿತ ಮಕ್ಕಳ ಹುಟ್ಟುಹಬ್ಬ, ಹೊಲಕ್ಕೆ ತೆರಳಿ ಉಳುಮೆ...ಇದು ರೇಣುಕಾಚಾರ್ಯ ಹೊಸ ಅವತಾರ!