ಹಾಸನ: ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ಗೆ ಹಾಸನದಲ್ಲಿ ಬೆಳಗ್ಗೆ ಮಿಶ್ರ ಪ್ರತಿಕ್ರಿಯೆ ದೊರೆತಿದೆ.
ಹಾಸನದಲ್ಲಿ ಬೆಳ್ಳಂಬೆಳಗ್ಗೆ ಎಂದಿನಂತೆ ಕೆಎಸ್ಆರ್ಟಿಸಿ ಬಸ್ಗಳು ಹಾಗೂ ಆಟೋಗಳು ತಮ್ಮ ಸಂಚಾರವನ್ನು ಆರಂಭಿಸಿದ್ದು, ಸದ್ಯದ ಪರಿಸ್ಥಿತಿಯಲ್ಲಿ ವಾಣಿಜ್ಯ ಮತ್ತು ಅಂಗಡಿ-ಮುಂಗಟ್ಟುಗಳು ಬಂದಾಗಿವೆ. ಈಗಾಗಲೇ ಮಾರುಕಟ್ಟೆಗಳಿಗೆ ಎಂದಿನಂತೆ ವ್ಯಾಪಾರ-ವಹಿವಾಟು ನಡೆಸಲು ಕೆಲವು ರೈತರು ಆಗಮಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿದೆ.
ಹಾಸನದ ಪ್ರಮುಖ ಸ್ಥಳಗಳಾದ ಎಪಿಎಂಸಿ ಮಾರುಕಟ್ಟೆ, ಹೊಸ ಬಸ್ ನಿಲ್ದಾಣ, ನಗರ ಸಾರಿಗೆ ಬಸ್ ನಿಲ್ದಾಣ, ನರಸಿಂಹರಾಜ ವೃತ್ತ, ಎಂಜಿ ರಸ್ತೆ, ರೈಲ್ವೆ ನಿಲ್ದಾಣದ ಸೇರಿದಂತೆ ಹಲವೆಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಸನ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಜಿಲ್ಲಾ ಸಶಸ್ತ್ರದಳ ಹಾಗೂ ಕೆಎಸ್ಆರ್ಪಿ ತುಕಡಿ ನಿಯೋಜಿಸಿದೆ.