ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಸೆರೆಯಾಗಿದೆ. ಬಿಸಿಲೆ ಸಮೀಪದ ಮಾಡಿಕೇರಿ ಗ್ರಾಮದಲ್ಲಿ ಸುಮಾರು 15 ಅಡಿಗೂ ಹೆಚ್ಚು ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು.
ಗ್ರಾಮದ ಮನೆಯೊಂದರ ಸಮೀಪ ಕಂಡುಬಂದ ಕಾಳಿಂಗ ಸರ್ಪವನ್ನು ಸ್ಥಳೀಯ ಉರಗತಜ್ಞ ರಘು ಅವರು ಸೆರೆಹಿಡಿದು, ಸುರಕ್ಷಿತವಾಗಿ ಬಿಸಿಲೆ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಕಾಳಿಂಗ ಸರ್ಪವನ್ನು ನೋಡಿ ಸ್ಥಳೀಯರು ಭಯಭೀತರಾಗಿದ್ದರು. ಗ್ರಾಮದಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಸುದೀಪ್ ನಟನೆಯ ಬಗ್ಗೆ ನಟಿ ಮಡೋನ್ನಾ ಸೆಬಾಸ್ಟಿಯನ್ ಹೀಗಂತಾರೇ..