ETV Bharat / state

ಶಿರಾಡಿ ಘಾಟ್​ನಲ್ಲಿ ಭೂಕುಸಿತ, ದಿನದ ಮಟ್ಟಿಗೆ ಏಕಮುಖ ಸಂಚಾರ

author img

By

Published : Jul 15, 2022, 11:12 AM IST

ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್​ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾಗಿದ್ದು, ಸಂಜೆ 6ರಿಂದ ಬೆಳಗ್ಗೆ 6 ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

shiradi ghat
ಶಿರಾಡಿ ಘಾಟ್​

ಹಾಸನ/ಸಕಲೇಶಪುರ: ಜಡಿ ಮಳೆಯಿಂದಾಗಿ ಶಿರಾಡಿ ಘಾಟ್​ನ ಬೆಂಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾಗಿದ್ದು, ಜು.14 ರಿಂದ ಮುಂದಿನ ಆದೇಶದವರೆಗೆ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು, ಕಾರುಗಳು, ಜೀಪ್​, ದ್ವಿಚಕ್ರ ವಾಹನ ಹಾಗೂ ತುರ್ತು ವಾಹನಗಳು (ಅಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳು) ಹೊರತುಪಡಿಸಿ ಉಳಿದ ಎಲ್ಲಾ ಬಗೆಯ ವಾಹನಗಳ ಸಂಚಾರವನ್ನು ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.

ಶಿರಾಡಿ ಘಾಟ್ ರಸ್ತೆಯಲ್ಲಿನ ದೋಣಿಗಾಲ್​ ಬಳಿ ಮತ್ತೆ ಭೂಕುಸಿತವಾಗಿದ್ದು, ಹೆಚ್ಚಿನ ಅಪಾಯ ಸಂಭವಿಸುವುದನ್ನು ತಡೆಯವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ವಾರ ತಾಲೂಕಿನ ದೋಣಿಗಲ್ ಸಮೀಪ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿತ್ತು. ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಚಿವರು ಭೇಟಿ ನೀಡಿದ ನಾಲ್ಕನೇ ದಿನಕ್ಕೆ ಮತ್ತೆ ಭೂ ಕುಸಿತವಾಗಿದೆ.

ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತೆ ಕುಸಿಯುತ್ತಿರುವ ರಸ್ತೆಯಿಂದ ಪ್ರಯಾಣಿಕರಲ್ಲಿ ಆತಂಕ ಹೆಚ್ಚಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಕಳೆದ ವರ್ಷದಂತೆ ಈ ವರ್ಷವೂ ರಸ್ತೆ ಕುಸಿತ ಉಂಟಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಒಂದು ದಿನದ ಮಟ್ಟಿಗೆ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ಪೋಲೆಂಡ್‌: ನಾಜಿಗಳಿಂದ ಕೊಲ್ಲಲ್ಪಟ್ಟ 8,000 ಮಂದಿಯ ಸಾಮೂಹಿಕ ಸಮಾಧಿ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.