ಹಾಸನ: ಆತ್ಮಹತ್ಯೆ ಮಾಡಿಕೊಂಡಿದ್ದ ಯೋಧನ ಮೃತದೇಹವನ್ನ ಹರಿಯಾಣದಿಂದ ಇಂದು ಸ್ವಗ್ರಾಮ ಕದಾಲು ಗ್ರಾಮಕ್ಕೆ ತರಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಸಿಆರ್ಪಿಎಫ್ ಯೋಧ ಮೋಹನ್ ಕುಮಾರ್, ಹರಿಯಾಣದ ತಮ್ಮ ಕಚೇರಿಯ ಶೌಚಾಲಯದ ಬಾಗಿಲಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಸಕಲೇಶಪುರ ಶಾಸಕ ಹೆಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ಮುಖಂಡ ಮಂಜೇಗೌಡ ಸೇರಿದಂತೆ ಹಲವು ಸ್ಥಳೀಯ ಜನಪ್ರತಿನಿಧಿಗಳು ಯೋಧನ ಅಂತಿಮ ದರ್ಶನ ಪಡೆದರು.
ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಕಳೆದ 8 ವರ್ಷಗಳಿಂದ ಸಿಆರ್ಪಿಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಮೋಹನ್, ಕಳೆದ 2 ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ತಮ್ಮ ಮನದಾಳದ ನೋವನ್ನ ಪತ್ರದ ಮೂಲಕ ಬರೆದಿಟ್ಟು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸವಿತಾ ಸಮಾಜದ ಸಂಪ್ರದಾಯದಂತೆ ಕುಟುಂಬಸ್ಥರು ವಿಧಿ ವಿಧಾನಗಳನ್ನ ನೆರೆವೇರಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.