ಹಾಸನ : ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಹೋಬಳಿಯ ಚೌರಗಲ್ ಹೆಚ್ಆರ್ಪಿ ಬಳಿ ಇಂದು ಬೆಳಗಿನ ಜಾವ ಗಂಡು ಚಿರತೆಯೊಂದು ಬೋನಿಗೆ ಬಿದ್ದಿದೆ.
ಕಳೆದ ಕೆಲ ತಿಂಗಳಿನಿಂದ ಈ ಭಾಗದಲ್ಲಿ ಚಿರತೆ ಮೇಯಲು ಬಿಟ್ಟಿದ್ದ ಆಡು ಹಾಗೂ ನಾಯಿಗಳನ್ನ ಕೊಂದು ಜನರಲ್ಲಿ ಭೀತಿ ಮೂಡಿಸಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ಐದು ದಿನಗಳ ಹಿಂದೆ ಚಿರತೆ ಸೆರೆಗೆ ಬೋನು ಇರಿಸಿದ್ದರು. ಕಡೆಗೂ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆಯಾಗಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.