ಚನ್ನರಾಯಪಟ್ಟಣ: ತಾಲೂಕಿನ ಹಿರಿಸ್ಯಾವೆ ಹೋಬಳಿ ಕೊತ್ತನಹಳ್ಳಿ ಗ್ರಾಮದಲ್ಲಿ ಸಾಕು ಪ್ರಾಣಿಗಳನ್ನು ತಿಂದು ಉಪಟಳ ನೀಡುತ್ತಿದ್ದ 2 ವರ್ಷದ ಹೆಣ್ಣು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.
ಈ ಚಿರತೆ ಮೂರು ತಿಂಗಳಿಂದ ಕುರಿ, ಮೇಕೆಗಳನ್ನು ತಿಂದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಭಯಬೀತರಾಗಿದ್ದ ಗ್ರಾಮಸ್ಥರು ಚಿರತೆ ಸೆರೆ ಹಿಡಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರಯಾಗಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಭಾಗದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗಿದ್ದು, ಅವುಗಳನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.