ಚನ್ನರಾಯಪಟ್ಟಣ (ಹಾಸನ): ಪಟ್ಟಣದಲ್ಲಿ ದಿನೇ ದಿನೇ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಚನ್ನರಾಯಪಟ್ಟಣದಲ್ಲಿ ಖಾಲಿಯಿರುವ ಪೊಲೀಸ್ ಹುದ್ದೆಗಳಿಗೆ ತುರ್ತಾಗಿ ನೇಮಕಾತಿ ಮಾಡುವಂತೆ ಗೃಹ ಸಚಿವರಿಗೆ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಪತ್ರ ಬರೆದಿದ್ದಾರೆ.
ಇತ್ತೀಚಿಗೆ ಹಾಸನ ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಜಿಲ್ಲೆಯಲ್ಲಿ 53 ಪೊಲೀಸ್ ಸಿಬ್ಬಂದಿಯ ಕೊರತೆಯಿದ್ದು, ಆದಷ್ಟು ಬೇಗ ಭರ್ತಿ ಮಾಡುವಂತೆ ಮನವಿ ಮಾಡಿದ್ದಾರೆ.