ETV Bharat / state

ಅಕ್ರಮ ಮದ್ಯ ಮಾರಾಟ ವಿರೋಧಿಸಿ ಬೀದಿಗಿಳಿದು ಪ್ರತಿಭಟಿಸಿದ ಗ್ರಾಮಸ್ಥರು - Illegal liquor possession

ಅಕ್ರಮ ಮದ್ಯ ಮಾರಾಟ ಸಂಬಂಧ ದೂರು ನೀಡಿದರು ಅಬಕಾರಿ, ಪೊಲೀಸ್ ಇಲಾಕೆ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೆ ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

Locals protest over banning of liqueur in village area
ಅಕ್ರಮ ಮದ್ಯ ಮಾರಾಟ ವಿರೋಧಿಸಿ ಬೀದಿಗಿಳಿದು ಪ್ರತಿಭಟಿಸಿದ ಗ್ರಾಮಸ್ಥರು
author img

By

Published : Sep 17, 2020, 7:47 PM IST

ಸಕಲೇಶಪುರ (ಹಾಸನ): ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ಕೂಡಲೆ ನಿಲ್ಲಿಸಬೇಕೆಂದು ಆಗ್ರಹಿಸಿ ತಾಲೂಕಿನ ಹೆಬ್ಬಸಾಲೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹೆಬ್ಬಸಾಲೆ ಗ್ರಾ.ಪಂ ವ್ಯಾಪ್ತಿಯ ಅಜ್ಜಿಗುಡ್ಡೆ, ಬಸವನಗುಡಿ, ಕಲ್ಲುಕೋರೆ ವ್ಯಾಪ್ತಿಯಲ್ಲಿ ಹಲವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ.

ಅಬಕಾರಿ, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೆ ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದಲ್ಲಿ‌ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದಿದ್ದಾರೆ.

ಅಕ್ರಮ ಮದ್ಯ ಮಾರಾಟ ವಿರೋಧಿಸಿ ಬೀದಿಗಿಳಿದು ಪ್ರತಿಭಟಿಸಿದ ಗ್ರಾಮಸ್ಥರು

ಸ್ಥಳಕ್ಕೆ ಆಗಮಿಸಿದ ಅಬಕಾರಿ ಅಧೀಕ್ಷಕ‌ ದಯಾನಂದ್ ಮಾತನಾಡಿ, ಗ್ರಾಮಸ್ಥರ ದೂರಿನಂತೆ ಕೆಲವರ ಮನೆ ಅಂಗಡಿಗಳನ್ನು ಪರಿಶೀಲಿಸಲಾಗಿದೆ. ಆದರೆ ಯಾವುದೇ ರೀತಿಯ ಮದ್ಯ ದೊರಕಿರುವುದಿಲ್ಲ, ಆದರು ಸಹ ರೇವತಮ್ಮ ಎಂಬುವರ ಮನೆ ಪರಿಶೀಲಿಸಿದ ವೇಳೆ ಅಕ್ರಮ ಮದ್ಯ ದೊರಕಿರುತ್ತದೆ.

ಈ ಹಿನ್ನೆಲೆ ದಂಡ ಕಟ್ಟಲು ಆದೇಶಿಸಲಾಗಿದೆ. ಯಾರೇ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಗ್ರಾಮದ ಸ್ತ್ರೀಶಕ್ತಿ ಸಂಘದ ಮುಖ್ಯಸ್ಥೆ ಕುಸುಮಾ, ಶಿಲ್ಪಾ, ಪ್ರವೀಣ್ , ಶ್ರೀಜಿತ್, ವಿಶ್ವನಾಥ್ ಮುಂತಾದವರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.