ETV Bharat / state

ಕೋವಿಡ್​ ತಡೆಗಟ್ಟಲು ಲಾಕ್​ಡೌನ್​ ಅನಿವಾರ್ಯ: ಶಾಸಕ ಎ.ಟಿ. ರಾಮಸ್ವಾಮಿ - ಶಾಸಕ ಎ. ಟಿ. ರಾಮಸ್ವಾಮಿ

ಸಾರ್ವಜನಿಕರು ಮತ್ತು ವರ್ತಕರು ಸಹಕಾರ ನೀಡಿ ಜೊತೆಗೆ ಪ್ರಪಂಚಕ್ಕೆ ಮಾರಕವಾಗಿರುವ ಕೊರೊನಾ ವೈರಸ್ ರೋಗ ತಡೆಗಟ್ಟಲು ಸಹಕರಿಸಬೇಕು. ಲಾಕ್​ಡೌನ್ ಸಮಯದಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳು ಲಭ್ಯವಿದ್ದು, ಸಾರ್ವಜನಿಕರು ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಬೇಕು ಎಂದು ಶಾಸಕ ಎ ಟಿ ರಾಮಸ್ವಾಮಿ ಹೇಳಿದರು.

hassan
ಎ.ಟಿ ರಾಮಸ್ವಾಮಿ
author img

By

Published : Jul 15, 2020, 3:01 PM IST

ಅರಕಲಗೂಡು(ಹಾಸನ): ತಾಲೂಕು ಕಚೇರಿಯಲ್ಲಿ ಕರೆಯಲಾದ ತಾಲೂಕಿನ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಶಾಸಕ ಎ. ಟಿ. ರಾಮಸ್ವಾಮಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕೋವಿಡ್ -19 ರೋಗವನ್ನು ತಡೆಗಟ್ಟಲು ಲಾಕ್​ಡೌನ್ ಅನಿವಾರ್ಯವಾಗಿದೆ ಎಂದು ಹೇಳಿದರು.

ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕ

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಅವಧಿಯಲ್ಲಿ ಸಾರ್ವಜನಿಕರು ಮತ್ತು ವರ್ತಕರು ಸಹಕಾರ ನೀಡಿ ಜೊತೆಗೆ ಪ್ರಪಂಚಕ್ಕೆ ಮಾರಕವಾಗಿರುವ ಕೊರೊನಾ ವೈರಸ್ ರೋಗ ತಡೆಗಟ್ಟಲು ಸಹಕರಿಸಬೇಕು. ಲಾಕ್​ಡೌನ್ ಸಮಯದಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳು ಲಭ್ಯವಿದ್ದು, ಸಾರ್ವಜನಿಕರು ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಬೇಕು ಮತ್ತು ಉಳಿದ ದಿನಗಳಾದ ಮಂಗಳವಾರ, ಗುರುವಾರ, ಶನಿವಾರ, ಭಾನುವಾರ ಸಂಪೂರ್ಣ ಲಾಕ್​ಡೌನ್ ಜಾರಿ ಇರುತ್ತದೆ ಎಂದು ತಿಳಿಸಿದರು.

ಲಾಕ್​ಡೌನ್ ಸಮಯದಲ್ಲಿ ಸಾರ್ವಜನಿಕರ ಓಡಾಟವನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸಹಕಾರ ಅತ್ಯಗತ್ಯವೆಂದು ತಿಳಿಸಿದರು. ಸಭೆಯಲ್ಲಿ ತಾಲೂಕು ತಹಶೀಲ್ದಾರ್ ರೇಣುಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಇನ್ಸ್​ಪೆಕ್ಟರ್ ದೀಪಕ್, ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ, ಡಾ.ದೀಪಕ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭಾಗೀರಥಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.