ETV Bharat / state

ರಾಮಾಯಣ ಮಹಾಕಾವ್ಯ ರಚಿಸಿದ ವಾಲ್ಮೀಕಿ ಸಾಧನೆ ವಿಶ್ವಕ್ಕೆ ಮಾದರಿ: ಶಿರಿನ್ ತಾಜ್ - ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ವಾಲ್ಮೀಕಿ ಜಯಂತಿ ಕಾರ್ಯಕ್ರಮ
author img

By

Published : Oct 14, 2019, 8:59 AM IST

ಹಾಸನ: ಮಾನವೀಯ ಮೌಲ್ಯಗಳಿಂದ ತುಂಬಿರುವ ರಾಮಾಯಣ ಮಹಾಕಾವ್ಯವನ್ನು ರಚಿಸಿದ ವಾಲ್ಮೀಕಿ ಸಾಧನೆ ವಿಶ್ವಕ್ಕೆ ಮಾದರಿ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಶಿರಿನ್ ತಾಜ್ ಅಭಿಪ್ರಾಯಪಟ್ಟರು.

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಜಿಲ್ಲೆಯ ಆಲೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಮಹರ್ಷಿ ಒಬ್ಬ ಋುಷಿ, ಸಂಸ್ಕೃತ ಕವಿ, ರಾಮಾಯಣ ಮಹಾಕಾವ್ಯದ ಕರ್ತೃ. ಮಹಾಕಾವ್ಯದ ಮೂಲಕ ವಿಶ್ವದ ಗಮನ ಸೆಳೆದ ಮಾನವತಾವಾದಿ. ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅನುಸರಿಸಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮಕ್ಕೂ ಮುನ್ನ ವಾಲ್ಮೀಕಿ ಮಹರ್ಷಿ ಭಾವಚಿತ್ರವನ್ನು ಆಲೂರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡುವ ಮೂಲಕ ತಾಲೂಕು ಕಚೇರಿಯ ಆವರಣದ ವೇದಿಕೆಗೆ ತರಲಾಯಿತು. ಇದೇ ವೇಳೆ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಇನ್ನು ಜಿಲ್ಲಾ ಎಪಿಎಂಸಿ ಅಧ್ಯಕ್ಷ ಕೆ.ಎಸ್.ಮಂಜೇಗೌಡ ಮಾತನಾಡಿ, ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯ ಹಾಗೂ ಮಹಾಕಾವ್ಯದಲ್ಲಿನ ಎಲ್ಲ ಪಾತ್ರಗಳು ಆಧ್ಯಾತ್ಮಿಕ, ಸಾಮಾಜಿಕ ನ್ಯಾಯ, ಮಾನವೀಯತೆ ಮತ್ತು ವಿಶ್ವ ಭ್ರಾತೃತ್ವದ ಪ್ರತೀಕವಾಗಿದ್ದು, ಭಾರತೀಯ ಸಮಾಜದ ಮೇಲೆ ಬಹಳಷ್ಟು ಪ್ರಭಾವ ಬೀರಿವೆ ಎಂದರು.

Intro:ಹಾಸನ: ಮಾನವೀಯ ಮೌಲ್ಯಗಳಿಂದ ತುಂಬಿರುವ ರಾಮಾಯಣ ಮಹಾಕಾವ್ಯವನ್ನು ರಚಿಸಿದ ವಾಲ್ಮೀಕಿ ಸಾಧನೆ ವಿಶ್ವಕ್ಕೇ ಮಾದರಿ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಶಿರಿನ್ ತಾಜ್ ಅಭಿಪ್ರಾಯಪಟ್ಟರು.

ಜಿಲ್ಲೆಯ ಆಲೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ರು.

ವಾಲ್ಮೀಕಿ ಮಹರ್ಷಿ ಒಬ್ಬ ಋುಷಿ, ಸಂಸ್ಕೃತ ಕವಿ, ರಾಮಾಯಣ ಮಹಾ ಕಾವ್ಯದ ಕರ್ತೃ. ಮಹಾ ಕಾವ್ಯದ ಮೂಲಕ ವಿಶ್ವದ ಗಮನ ಸೆಳೆದ ಮಾನವತಾವಾದಿ.ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅನುಸರಿಸಬೇಕು. ಕಾವ್ಯದ ಸಾರಾಂಶವನ್ನು ಮನನ ಮಾಡಿಕೊಳ್ಳಬೇಕು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದು ಸತ್ಪ್ರಜೆಗಳಾಗಿ ನೆಮ್ಮದಿ ಜೀವನ ನಡೆಸಬೇಕು ಎಂದು ಅವರು ಸಲಹೆ ಮಾಡಿದರು.

ಬೈಟ್ :ಶಿರಿನಾ ತಾಜ್, ತಹಶೀಲ್ದಾರರು. ಆಲೂರು.

ಹಾಸನ ಜಿಲ್ಲಾ ಎಪಿಎಂಸಿ ಅಧ್ಯಕ್ಷ ಜೇಗೌಡ ಮಾತನಾಡಿ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯ ಹಾಗೂ ಮಹಾಕಾವ್ಯದಲ್ಲಿನ ಎಲ್ಲ ಪಾತ್ರಗಳು ಆಧ್ಯಾತ್ಮಿಕ, ಸಾಮಾಜಿಕ ನ್ಯಾಯ, ಮಾನವೀಯತೆ ಮತ್ತು ವಿಶ್ವ ಭ್ರಾತೃತ್ವದ ಪ್ರತೀಕವಾಗಿದ್ದು, ಭಾರತೀಯ ಸಮಾಜದ ಮೇಲೆ ಬಹಳಷ್ಟು ಪ್ರಭಾವ ಬೀರಿವೆ. ಜಾತಿ ಸಂಕೋಲೆಗಳನ್ನು ಬಿಡಿಸಲು ಪ್ರಯತ್ನಿಸಿದ್ದಾರೆ. ಸಮಾಜದಲ್ಲಿ ಯಾರೇ ಹೆಣ್ಣಿನ ಶೋಷಣೆ ಮಾಡಿದರೂ ಅವರು ಸೋಲಬೇಕು ಎಂಬ ಸಂದೇಶವನ್ನು ರಾಮಾಯಣದಲ್ಲಿ ವಾಲ್ಮೀಕಿ ಮನುಕುಲಕ್ಕೆ ತೋರಿಸಿದ್ದಾರೆ ಎಂದ್ರು.

ಬೈಟ್: ಕೆ.ಎಸ್.ಮಜೇಗೌಡ., ಎಪಿಎಂಸಿ ಅಧ್ಯಕ್ಷ

ಕಾರ್ಯಕ್ರಮಕ್ಕೂ ಮುನ್ನ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರವನ್ನು ಆಲೂರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡುವ ಮೂಲಕ ತಾಲ್ಲೂಕು ಕಚೇರಿಯ ಆವರಣದ ವೇದಿಕೆಗೆ ತರಲಾಯಿತು. ಇದೇ ವೇಳೆ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಸತೀಶ್, ಪಾಳ್ಯ ತಾಲ್ಲೂಕು ಪಂಚಾಯಿತಿ ಸದಸ್ಯ ಸಿ.ವಿ. ಲಿಂಗರಾಜು, ತಾಳೂರು ತಾಲ್ಲೂಕು ಪಂಚಾಯಿತಿ ಸದಸ್ಯೆ ರತ್ನಮ್ಮ, ಎ.ಪಿ.ಎಂ.ಸಿ. ನಿರ್ದೇಶಕ ರಾಜಾನಾಯ್ಕ್ , ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮೋಹನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎ.ಟಿ. ಮಲ್ಲೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಶೋಭಾ,ಹಾಗೂ ಇತರರು ಉಪಸ್ಥಿತರಿದ್ದರು.

Body:0

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.