ETV Bharat / state

ಸೋಂಕಿತ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಆರೋಪ: ಹಾಸನದಲ್ಲಿ ಮಲೆನಾಡು ಇಂಜಿನಿಯರಿಂಗ್ ಸ್ಟೂಡೆಂಟ್ಸ್​ ಪ್ರತಿಭಟನೆ - ಮಲೆನಾಡು ಇಂಜಿನಿಯರಿಂಗ್ ಕಾಲೇಜು

ಹಾಸನದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳೊಂದಿಗೆ ಆರೋಗ್ಯವಂತ ವಿದ್ಯಾರ್ಥಿಗಳನ್ನು ಕೂರಿಸಿ ಪರೀಕ್ಷೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ರೋಸಿ ಹೋದ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

malanadu-engineering-students-protest-in-hassan
ಸೋಂಕಿತ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಆರೋಪ
author img

By

Published : Apr 23, 2021, 10:09 PM IST

ಹಾಸನ: ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಇವತ್ತು ಪರೀಕ್ಷೆ ಬರೆಯಲು ಮುಂದಾಗದೇ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಸೋಂಕಿತ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಆರೋಪ

ಪರೀಕ್ಷೆ ಬರೆದಿರುವ ಸುಮಾರು 50 ರಿಂದ 60 ಮಂದಿಗೆ ಕೊರೊನಾ ಸೋಂಕು ತಗುಲಿದ್ದರೂ, ಅಂತಹ ವಿದ್ಯಾರ್ಥಿಗಳನ್ನು ಇತರ ವಿದ್ಯಾರ್ಥಿಗಳ ಜೊತೆಯಲ್ಲಿಯೇ ಕೂರಿಸಿ ಪರೀಕ್ಷೆ ಬರೆಸಲಾಗುತ್ತಿದೆ. ಲ್ಯಾಬ್ ಪರೀಕ್ಷೆಗಳನ್ನು ಒಟ್ಟೊಟ್ಟಿಗೆ ಮಾಡುತ್ತಿರುವುದು ವಿದ್ಯಾರ್ಥಿಗಳಿಗೆ ಭಯದ ವಾತಾವರಣ ನಿರ್ಮಾಣ ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹಾಗಾಗಿ ಕೊರೊನಾ ಸೋಂಕು ಕಡಿಮೆಯಗುವ ತನಕ ಪರೀಕ್ಷೆಗಳನ್ನು ಮುಂದೂಡಿ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಡಳಿತ ಮಂಡಳಿ, ಸೋಂಕು ತಗಲಿರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಪರೀಕ್ಷೆ ಮಾಡಲು ಸಾಧ್ಯವಿಲ್ಲ. ಪ್ರತಿಭಟನೆಗೆ ಯಾವುದೇ ಅನುಮತಿ ಪಡೆದಿಲ್ಲ. ಕೆಲವರು ನಕಲಿ ಪ್ರಮಾಣ ಪತ್ರವನ್ನು ತಂದು ಪರೀಕ್ಷೆ ಬರೆಯುತ್ತಿದ್ದಾರೆ ಎಂಬ ಆರೋಪಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.