ETV Bharat / state

ಹಾಸನ ನಗರದ ರೈಲ್ವೆ ನಿಲ್ದಾಣದ ಬಳಿ ವ್ಯಕ್ತಿಯ ಬರ್ಬರ ಹತ್ಯೆ

ಹಾಸನ ನಗರದ ರೈಲ್ವೆ ನಿಲ್ದಾಣದ ಬಳಿ ವ್ಯಕ್ತಿಯೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

man-murdered-in-railway-station
ಬರ್ಬರ ಕೊಲೆ
author img

By

Published : Jun 20, 2020, 3:06 PM IST

ಹಾಸನ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ ಹಾಸನ ನಗರದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ವ್ಯಕ್ತಿಯ ಬರ್ಬರ ಕೊಲೆ
ಕೊಲೆ ಮಾಡಿರುವ ಹಾಗೂ ಕೊಲೆಯಾಗಿರುವ ವ್ಯಕ್ತಿ ಯಾರು ಎಂಬುದು ಗೊತ್ತಾಗಿಲ್ಲ. ಆದರೆ 35ರಿಂದ 40ರ ವಯೋಮಾನದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ನಗರದಲ್ಲಿಯೇ ಸಣ್ಣಪುಟ್ಟ ಕೆಲಸ ಮಾಡಿಕೊಂಡು ನಗರದ ರೈಲ್ವೆ ನಿಲ್ದಾಣದ ಬಳಿಯೇ ತಿರುಗಾಡಿಕೊಂಡು ಇದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಕುಡಿದ ಅಮಲಿನಲ್ಲಿ ಗಲಾಟೆ ಮಾಡಿಕೊಂಡು ಬಳಿಕ ಈತನ ಸ್ನೇಹಿತರೇ ಬಹುಶಃ ಕೊಲೆ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದು ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಕಳೆದ ಫೆಬ್ರವರಿಯಿಂದ ಈತ ರೈಲ್ವೆ ನಿಲ್ದಾಣ ಎದುರಿನ ಆಂಜನೇಯ ದೇವಸ್ಥಾನ ಮತ್ತು ರಾಜಘಟ್ಟ ಬಳಿ ತಿರುಗಾಡಿಕೊಂಡಿದ್ದ ಎಂಬ ಮಾಹಿತಿಯನ್ನು ಸ್ಥಳೀಯರು ಪೊಲೀಸರಿಗೆ ನೀಡಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಶೇಷ ತಂಡ ರಚನೆ ಮಾಡಿ ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಜೊತೆಗೆ ಅನುಮಾನದ ಮೇಲೆ ಓರ್ವ ಮಹಿಳೆ ಸೇರಿದಂತೆ ನಾಲ್ಕು ಮಂದಿಯನ್ನ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.