ETV Bharat / state

ಹೇಮಾವತಿ ಜಲಾಶಯಕ್ಕೆ ಸಚಿವ ಕೆ. ಗೋಪಾಲಯ್ಯ ಭೇಟಿ - Goruru dam

ಹೇಮಾವತಿ ಜಲಾಶಯಕ್ಕೆ ಈಗಾಗಲೇ 50 ಸಾವಿರ ಕ್ಯೂಸೆಕ್‌ ನೀರು ಒಳಹರಿವಿದೆ. 20 ಸಾವಿರ ಕ್ಯೂಸೆಕ್‌ ನೀರು ನಾಲೆ ಹಾಗೂ ನದಿಗೆ ಹರಿಬಿಡಲಾಗುತ್ತಿದೆ..

Hemavathi dam
Hemavathi dam
author img

By

Published : Aug 8, 2020, 3:05 PM IST

ಹಾಸನ : ಹೇಮಾವತಿ ಜಲಾನಯನ ಪ್ರದೇಶಗಳ ಕೆರೆ-ಕಟ್ಟೆಗಳಿಗೆ ಹಾಗೂ ಇತರ ಜಿಲ್ಲೆಗಳಿಗೆ ನೀರನ್ನು ಹರಿಬಿಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.

ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಸಚಿವರು, ಜಲಾಶಯಕ್ಕೆ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ನೀರನ್ನು ಹರಿಬಿಡಲು ಇಂಜಿನಿಯರ್‌ಗಳಿಗೆ ತಿಳಿಸಿದರು.

ಹೇಮಾವತಿ ಜಲಾಶಯಕ್ಕೆ ಒಳಪಡುವ ಜಿಲ್ಲೆಗಳಾದ ತುಮಕೂರು, ಹಾಸನ ಹಾಗೂ ಮಂಡ್ಯ ಜಿಲ್ಲೆಗಳಿಗೆ ಕೆರೆಕಟ್ಟೆಗಳ ನೀರು ತುಂಬಿಸಲು ನಾಲೆಗಳಿಗೆ ನೀರನ್ನು ಬಿಡುವಂತೆ ಸೂಚನೆ ನೀಡಿದರು. ಹೇಮಾವತಿ ಜಲಾಶಯಕ್ಕೆ ಈಗಾಗಲೇ 50 ಸಾವಿರ ಕ್ಯೂಸೆಕ್‌ ನೀರು ಒಳಹರಿವಿದೆ. 20 ಸಾವಿರ ಕ್ಯೂಸೆಕ್‌ ನೀರು ನಾಲೆ ಹಾಗೂ ನದಿಗೆ ಹರಿಬಿಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಹೇಮಾವತಿ ಅಣೆಕಟ್ಟೆ ವೀಕ್ಷಿಸಿ ನೀರಿನ ಸಂಗ್ರಹದ ಮಾಹಿತಿ ಪಡೆದರು. ಮಳೆಯಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಗಮನಿಸಿದ್ದೇನೆ. ಮಳೆಯಿಂದ ಸಮಸ್ಯೆ ಆಗದ ರೀತಿ ಅಧಿಕಾರಿಗಳು ಕ್ರಮಕೈಗೊಳ್ಳಲಿದ್ದಾರೆ ಎಂದರು. ಶಾಸಕರು, ಅಧಿಕಾರಿಗಳ ಸಲಹೆ ಪಡೆದು ಎಲ್ಲವನ್ನು ಸರಿ ಪಡಿಸುತ್ತೇನೆ. ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಬಿಡಬೇಕಾದ ನೀರು ಬಿಡಲೇಬೇಕು ಎಂದು ಹೇಳಿದರು.

ಈ ವೇಳೆ ಅರಕಲಗೂಡು ಶಾಸಕರಾದ ರಾಮಸ್ವಾಮಿ ಹಾಗೂ ಜಲಾಶಯದ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.