ಸಕಲೇಶಪುರ: ಕೋವಿಡ್-19 ತಡೆಗಟ್ಟಲು ಜನರು ಹೆಚ್ಚಿನ ಎಚ್ಚರ ವಹಿಸಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದರು.
ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ದೇವರ ದರ್ಶನ ಪಡೆದ ನಂತರ ಮಾಸ್ಕ್ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಲು ಮಾಸ್ಕ್ ಡೇ ಆಚರಿಸಲಾಗುತ್ತಿದೆ. ಕೋವಿಡ್ ಯಾರ ಕಣ್ಣಿಗೂ ಕಾಣುವುದಿಲ್ಲ. ಇದನ್ನು ತಡೆಗಟ್ಟಬೇಕಾದರೆ ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಇದರಿಂದ ಮಾತ್ರ ಕೊರೊನಾ ತಡೆಗಟ್ಟಲು ಸಾಧ್ಯ ಎಂದರು.
ನಂತರ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಕಾಲ್ನಡಿಗೆ ಮುಖಾಂತರ ಮಾಸ್ಕ್ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡರು.