ETV Bharat / state

ಟ್ರಕ್ ಟರ್ಮಿನಲ್ ವಿವಾದ : ಆರ್. ಅಶೋಕ್ ಅವರು ಕ್ರಮ ಕೈಗೊಳ್ಳಲಿದ್ದಾರೆ- ಸಚಿವ ಕೆ. ಗೋಪಾಲಯ್ಯ

ಹಾಸನ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ನಾಯಕರು ತಡೆಯೊಡ್ಡುವುದು ಸರಿಯಲ್ಲ. ಅಭಿವೃದ್ಧಿಗೆ ಬೆಂಬಲ ನೀಡುವ ಮೂಲಕ ಉತ್ತಮ ಆಡಳಿತ ನೀಡಲು ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ತಿಳಿಸಿದರು.

ಸಚಿವ ಕೆ. ಗೋಪಾಲಯ್ಯ
ಸಚಿವ ಕೆ. ಗೋಪಾಲಯ್ಯ
author img

By

Published : May 2, 2022, 5:48 PM IST

ಹಾಸನ : ಟ್ರಕ್ ಟರ್ಮಿನಲ್ ವಿಚಾರವಾಗಿ ಉಂಟಾಗಿರುವ ಗೊಂದಲವನ್ನು ಮೂರ್ನಾಲ್ಕು ದಿನದಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ಅವರು ಸ್ಥಳ ಪರಿಶೀಲನೆ ಜತೆಗೆ ಸಭೆ ನಡೆಸಿ ಕಾನೂನು ರೀತಿ ಕ್ರಮಕೈಗೊಳ್ಳಲಿದ್ದಾರೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ಮಾತನಾಡಿರುವುದು..

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಕ್ಕೆ ಸಮೀಪದ ಹೇಮಗಂಗೋತ್ರಿ ಎದುರು ಟ್ರಕ್ ಟರ್ಮಿನಲ್ ನಿರ್ಮಾಣ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ಶಾಸಕರ ನಡುವೆ ಉಂಟಾಗಿರುವ ಗೊಂದಲದ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ಹಿರಿಯರಿದ್ದಾರೆ ಮತ್ತು ಅನುಭವಿಗಳು, ಅವರೇ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಅವರಿಗೂ ಕೆಲ ದಿನದಿಂದ ನಡೆದಿರುವ ಎಲ್ಲ ಬೆಳವಣಿಗೆ ಬಗ್ಗೆ ಮಾಹಿತಿ ತಿಳಿಸಿದ್ದೇನೆ. ಈಗಾಗಲೇ ಅಗತ್ಯ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಸ್ಥಳದಲ್ಲಿ ನಿಷೇಧ ಜಾರಿ ಮಾಡಲಾಗಿದೆ. ಯಾವುದೇ ಕಾಮಗಾರಿ ನಡೆಯದಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ತಾಲೂಕು ಕಚೇರಿ ತೆರವು ಸಂಬಂಧ ಹಿಂದೆಯೇ ತೀರ್ಮಾನ ಕೈಗೊಳ್ಳಲಾಗಿತ್ತು. 60 ರಿಂದ 70 ವರ್ಷ ಪೂರೈಸಿರುವ ಕಟ್ಟಡಗಳನ್ನು ತೆರವು ಮಾಡುವಂತೆ ಈಗಾಗಲೇ ನಿರ್ಧರಿಸಲಾಗಿದೆ. ಟ್ರಾಫಿಕ್ ಸಮಸ್ಯೆ ಹಿನ್ನೆಲೆ ರಾತ್ರಿಯೇ ಕಟ್ಟಡ ತೆರವು ಕಾರ್ಯಾಚರಣೆ ನಡೆದಿದೆ. ಇದರಲ್ಲಿ ಯಾವುದೇ ರಾಜಕೀಯ ಮಾಡಿಲ್ಲ ಎಂದು ಸಮರ್ಥನೆ ಮಾಡಿದರು.

ಅಭಿವೃದ್ಧಿಗೆ ತಡೆಯೊಡ್ಡುವುದು ಸರಿಯಲ್ಲ!

ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ನಾಯಕರು ತಡೆಯೊಡ್ಡುವುದು ಸರಿಯಲ್ಲ. ಅಭಿವೃದ್ಧಿಗೆ ಬೆಂಬಲ ನೀಡುವ ಮೂಲಕ ಉತ್ತಮ ಆಡಳಿತ ನೀಡಲು ಸಹಕಾರ ನೀಡಬೇಕು ಎಂದು ತಿಳಿಸಿದ ಗೋಪಾಲಯ್ಯ ಅವರು, ಕೆಲ ದಿನಗಳಲ್ಲಿ ಗೊಂದಲಕ್ಕೆ ತೆರೆ ಎಳೆಯಲಾಗುವುದು ಎಂದು ಹೇಳಿದರು.

ಹೊಸಬರಿಗೆ ಮಣೆ ವರಿಷ್ಠರಿಗೆ ಬಿಟ್ಟ ವಿಚಾರ

ಮುಂದಿನ ಅವಧಿಗೆ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೊಸಬರಿಗೆ ಮಣೆ ಹಾಕಬೇಕು ಎಂಬ ವಿಚಾರವಾಗಿ ಬಿಜೆಪಿ ಮುಖಂಡ ಬಿ ಎಲ್‌ ಸಂತೋಷ್ ಅವರು ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ. ನಾವು ಪಕ್ಷ ತೊರೆದ ನಂತರ ಬಿಜೆಪಿಯಲ್ಲಿ ಟಿಕೆಟ್ ಪಡೆದು ಗೆದ್ದು, ಇದೀಗ ಗೌರವಯುತವಾಗಿ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ. ಪಕ್ಷವೂ ನಮ್ಮನ್ನು ಗೌರವಯುತವಾಗಿ ಕಂಡಿದೆ.

ಅಲ್ಲದೇ, ಎರಡು ಜಿಲ್ಲೆಯ ಉಸ್ತುವಾರಿಯಾಗಿ ಕೆಲಸ ನಿರ್ವಹಿಸಿದ್ದು, ಅದಕ್ಕೆ ನಾವು ಗೌರವಯುತವಾಗಿ ನಡೆದುಕೊಳ್ಳುತ್ತಿದ್ದೇವೆ. ವರಿಷ್ಠರ ಯಾವುದೇ ತೀರ್ಮಾನಕ್ಕೆ ನಾವು ಬದ್ಧವಾಗಿರುತ್ತೇವೆ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಹಾಗೂ ಬಸವರಾಜ್ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಓದಿ: ಸಂಪುಟ ವಿಸ್ತರಣೆ ಆಗುವುದು ಅನುಮಾನ : ಶಾಸಕ ಅಭಯ ಪಾಟೀಲ್​

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.