ಹಾಸನ: ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಇಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊರೊನಾ ತಪಾಸಣೆ ಹಾಗೂ ಚಿಕಿತ್ಸಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿ ಕೊರೊನಾದಿಂದ ಸಾವನಪ್ಪದಂತೆ ಎಲ್ಲಾ ರೀತಿಯ ಮುಂಜಾಗ್ರತೆ ವಹಿಸಬೇಕು. ಅಲ್ಲದೇ ಎಲ್ಲಾ ಸೋಂಕಿತರಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಎಂದರು.
ಈ ಸಂದರ್ಭ ಶಾಸಕ ಸಿ.ಎನ್.ಬಾಲಕೃಷ್ಣ, ಪ್ರೀತಂ ಜೆ. ಗೌಡ , ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಸೇರಿದಂತೆ ಇತರರು ಇದ್ದರು.