ETV Bharat / state

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗೆ ಆದ್ಯತೆ: ಸಚಿವ ಕೆ.ಎಸ್. ಈಶ್ವರಪ್ಪ - ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿ

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗೆ ನಾನು ಹೆಚ್ಚಿನ ಅನುದಾನ ಮೀಸಲಿಡುತ್ತೇನೆ. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಕುಂಠಿತಗೊಂಡಿಲ್ಲ, ಇತ್ತೀಚೆಗಷ್ಟೆ ನಡೆದ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

Minister K.S. Ishwarappa talk
ಸಚಿವ ಕೆ.ಎಸ್. ಈಶ್ವರಪ್ಪ
author img

By

Published : Feb 28, 2021, 9:07 PM IST

ಸಕಲೇಶಪುರ: ಮುಂಬರುವ ಬಜೆಟ್‌ನಲ್ಲಿ ಗ್ರಾಮೀಣ ಅಭಿವೃದ್ದಿಗೆ ಸರ್ಕಾರ ಹೆಚ್ಚಿನ ಅನುದಾನ ಕೊಡುವ ನಿರೀಕ್ಷೆಯಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ಓದಿ: ಹುಬ್ಬಳ್ಳಿಯಲ್ಲಿ 'ರಾಬರ್ಟ್​​' ಪ್ರಿ ರಿಲೀಸ್​ ಕಾರ್ಯಕ್ರಮ : ನೇರಪ್ರಸಾರ

ತಾಲೂಕಿನ ದೇವಾಲದಕೆರೆ ಪಂಚಾಯತಿ ವ್ಯಾಪ್ತಿಯ ಬಣಾಲು ಗ್ರಾಮದಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ನಿರ್ಮಾಣವಾಗಿರುವ ರೆಸಾರ್ಟ್‌ವೊಂದರ ಉದ್ಘಾಟನೆಗೆ ಇಲ್ಲಿಗೆ ಆಗಮಿಸಿದ್ದೇನೆ. ಮಲೆನಾಡಿನಲ್ಲಿ ರಸ್ತೆ ಸಮಸ್ಯೆ ಬಗ್ಗೆ ನನಗೆ ಅರಿವಿದೆ. ಮುಂಬರುವ ಬಜೆಟ್‌ನಲ್ಲಿ ನನ್ನ ಇಲಾಖೆಗೆ ಹೆಚ್ಚಿನ ಅನುದಾನ ಕೊಡುವ ನಿರೀಕ್ಷೆಯಿದೆ.

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗೆ ನಾನು ಹೆಚ್ಚಿನ ಅನುದಾನ ಮೀಸಲಿಡುತ್ತೇನೆ. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಕುಂಠಿತಗೊಂಡಿಲ್ಲ, ಇತ್ತೀಚೆಗಷ್ಟೆ ನಡೆದ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳ ಜೊತೆಗೆ ಪಕ್ಷದ ಸಂಘಟನೆ ನಡೆಯುತ್ತಿದೆ. ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಯನ್ನು ಎದುರಿಸಲು ಈಗಾಗಲೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಇದೇ ವೇಳೆ ಕಿಡ್ನಿ ವೈಫಲ್ಯದಿಂದ ನರಳುತ್ತಿರುವ ಗ್ರಾಮದ ಪ್ರಾಪ್ತಿ ಎಂಬ ಹುಡುಗಿಯ ಪೋಷಕರು ನೆರವಿಗೆ ಮನವಿ ಸಲ್ಲಿಸಿದರು. ಈ ಹಿನ್ನೆಲೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಗೋಪಾಲಯ್ಯರವರನ್ನು ಭೇಟಿ ಮಾಡಲು ಹೇಳಿದರು. ಈ ಸಂದರ್ಭದಲ್ಲಿ ಯಸಳೂರು ತೆಂಕಲಗೋಡು ಮಠದ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಆಗಮಿಸಿ ಮಠದ ಅಭಿವೃದ್ದಿಗೆ ನೆರವು ನೀಡುವಂತೆ ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.