ETV Bharat / state

ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್​​ ಕುರಿತು ರೈತರಿಗೆ ತರಬೇತಿ: ಸಚಿವ ಗೋಪಾಲಯ್ಯ

author img

By

Published : Aug 15, 2020, 7:48 PM IST

ಆ್ಯಪ್​​​ನಲ್ಲಿ ದಾಖಲಿಸಿದ ರೈತರ ಬೆಳೆ ವಿವರಗಳನ್ನು ಸರ್ಕಾರದ ಮುಂದಿನ ವಿವಿಧ ಯೋಜನೆಗಳಿಗೆ ಉಪಯೋಗಿಸಿಕೊಳ್ಳಲಾಗುತ್ತದೆ. ಕೊರೊನಾ ಹಿನ್ನೆಲೆಯಲ್ಲಿ ಮೆಕ್ಕೆಜೋಳ ಬೆಳೆಗಾರರಿಗೆ ₹5 ಸಾವಿರ ಸಹಾಯಧನ ನೀಡಿದ್ದು, ಅದನ್ನು ಬೆಳೆ ಸಮೀಕ್ಷೆ ಆಧರಿಸಿ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.

minister visit to huvinahalli village
ರೈತರ ಜಮೀನಿಗೆ ಭೇಟಿ ನೀಡಿದ ಸಚಿವ ಗೋಪಾಲಯ್ಯ

ಹಾಸನ: ರೈತರಿಗೆ ಸಹಾಯವಾಗುವಂತೆ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್​​ ಬಿಡುಗಡೆ ಮಾಡಲಾಗಿದ್ದು, ಅದರ ಬಳಕೆ ಕುರಿತು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ರೈತರಿಗೆ ತರಬೇತಿ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ತಾಲೂಕಿನ ಹೂವಿನಹಳ್ಳಿ ಕಾವಲಿನ ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್​​​​ ಕಾರ್ಯವೈಖರಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಆ್ಯಪ್ ಮೂಲಕ ಯಾವ ಬೆಳೆ ಬೆಳೆದಿದ್ದಾರೆ. ಎಷ್ಟು ಎಕರೆ, ಎಷ್ಟು ಕುಂಟೆ ಎಂಬ ಪೂರ್ಣ ಮಾಹಿತಿ ಪಡೆಯಬಹುದಾಗಿದೆ ಎಂದರು.

ಮೊಬೈಲ್ ಇಲ್ಲದ ರೈತರ ಹತ್ತಿರ ಆ.24ರ ನಂತರ ಅಧಿಕಾರಿಗಳು ಭೇಟಿ ನೀಡಿ ಆ್ಯಪ್ ಮೂಲಕ ಸಮೀಕ್ಷೆ ನಡೆಸಿ ಗ್ರಾ.ಪಂ. ಕಾರ್ಯಾಲಯದಲ್ಲಿ ಪ್ರಕಟಿಸಲಾಗುತ್ತದೆ. ರೈತರು ಮುಂದಿನ ದಿನಗಳಲ್ಲಿ ಬೆಳೆ ನಷ್ಟ ಅನುಭವಿಸಿದ ಸಂದರ್ಭದಲ್ಲಿ ಸಂಪೂರ್ಣ ಮಾಹಿತಿ ಮತ್ತು ಕಾಲ ಕಾಲಕ್ಕೆ ಬೆಳೆಯುವ ಬೆಳೆಗಳ ಕುರಿತ ಮಾಹಿತಿ ಸಂಗ್ರಹವಿರುತ್ತದೆ. ಇದರಿಂದ ಸರ್ಕಾರಕ್ಕೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್​​​​ ಕಾರ್ಯವೈಖರಿ ಪರಿಶೀಲಿಸಿದ ಸಚಿವ

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ತಮ್ಮ ಜಮೀನಿನ ಮತ್ತು ಬೆಳೆಗಳ ಫೋಟೋವನ್ನು​ ರೈತರೇ ಅಪ್ಲೋಡ್ ಮಾಡಬಹುದಾಗಿದೆ. ಆ್ಯಪ್ ಮೂಲಕ ಸರ್ವೆ ನಂಬರ್ ಖಾತರಿಪಡಿಸಿಕೊಂಡು ಎರಡು ರೀತಿಯ ಬೆಳೆ ಬೆಳೆದಿದ್ದಲ್ಲಿ ಅದರ ಪೂರ್ಣ ವಿವರ ದಾಖಲಿಸಿ ಅದಕ್ಕೆ ತಕ್ಕಂತೆ ಫೋಟೋ ಅಪ್ಲೋಡ್ ಮಾಡಬಹುದಾಗಿದೆ ಎಂದರು.

ಸರ್ಕಾರದ ಮುಖ್ಯ ಉದ್ದೇಶವೇನೆಂದರೆ ಜಮೀನಿನ ವಿವರಗಳನ್ನು ರೈತರೇ ದಾಖಲಿಸುವ ಮೂಲಕ ಯಾವುದೇ ತಪ್ಪಾಗದಂತೆ ನಿಗಾ ವಹಿಸವುದಾಗಿದೆ. ಈ ಹಿಂದೆ ಗೊಂದಲಗಳು ಉಂಟಾಗುತ್ತಿದ್ದು, ಇನ್ನು ಮುಂದೆ ಈ ಸಮಸ್ಯೆ ಎದುರಾಗುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸ್ವಯಂಪ್ರೇರಿತರಾಗಿ ಬಂದು ತಮ್ಮ ಜಮೀನಿನ ಬೆಳೆಗಳ ವಿವರಗಳನ್ನು ದಾಖಲಿಸಿಕೊಳ್ಳುವಂತೆ ತಿಳಿಸಿದರು.

ಇದೊಂದು ಆನ್​​ಲೈನ್ ಆ್ಯಪ್ ಆಗಿದ್ದು, ಜಮೀನಿನ ಬಳಿ ಬಂದಾಗ ಅದರ ಸರ್ವೆ ನಂಬರ್ ತೋರಿಸುತ್ತದೆ. ಅದರ ಆಧಾರದ ಮೇಲೆ ಮಾಹಿತಿ ದಾಖಲು ಮಾಡಲಾಗುತ್ತದೆ. ನಷ್ಟ ಪರಿಹಾರಕ್ಕೂ ಸಹ ಇದರ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.